ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದಿರುವ ಬೆನ್ನಲ್ಲೇ, ಅಂತಾರಾಷ್ಟ್ರೀಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಅಮೆರಿಕಾ ಮತ್ತು ಇಸ್ರೇಲ್ ವಿರುದ್ಧದ ಸಂಘರ್ಷದಲ್ಲಿ ಇರಾನ್ ದೇಶಕ್ಕೆ ಉತ್ತರ ಕೊರಿಯಾ ತನ್ನ ಅಧಿಕೃತ ಬೆಂಬಲವನ್ನು ಘೋಷಿಸಿದೆ.
ಇರಾನ್ ಪರ ಕಿಮ್ ಜಾಂಗ್ ಉನ್ ಬ್ಯಾಟಿಂಗ್
ಅಮೆರಿಕಾ ಮತ್ತು ಇಸ್ರೇಲ್ ದೇಶಗಳು ಇರಾನ್ ಮೇಲೆ ನಡೆಸುತ್ತಿರುವ ವಾಗ್ದಾಳಿ ಹಾಗೂ ಸಂಘರ್ಷದ ಹಾದಿಯನ್ನು ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ತೀವ್ರವಾಗಿ ಖಂಡಿಸಿದ್ದಾರೆ. ಇರಾನ್‌ನ ಸಾರ್ವಭೌಮತ್ವದ ಮೇಲೆ ನಡೆಯುತ್ತಿರುವ ಇಂತಹ ಕೃತ್ಯಗಳನ್ನು ಸಹಿಸುವುದಿಲ್ಲ ಎಂದು ಕಿಮ್ ತಿಳಿಸಿದ್ದು, ಸಂಕಷ್ಟದ ಸಮಯದಲ್ಲಿ ತಾವು ಇರಾನ್ ಜೊತೆಗೆ ಇರುವುದಾಗಿ ಹೇಳಿದ್ದಾರೆ.
ಮೊಜ್ತಬಾ ಆಯ್ಕೆಗೆ ಬೆಂಬಲ
ಇರಾನ್‌ನ ನಾಯಕತ್ವದಲ್ಲಿ ಆಗಿರುವ ಬದಲಾವಣೆಯನ್ನು ಉತ್ತರ ಕೊರಿಯಾ ಸ್ವಾಗತಿಸಿದೆ. ಇರಾನ್‌ನ ಸರ್ವೋಚ್ಚ ನಾಯಕನಾಗಿ ಮೊಜ್ತಬಾ ಅವರ ಆಯ್ಕೆ ಸರಿಯಾದ ಕ್ರಮವಾಗಿದೆ ಎಂದು ಕಿಮ್ ಜಾಂಗ್ ಉನ್ ಅಭಿಪ್ರಾಯಪಟ್ಟಿದ್ದಾರೆ. ಇದು ಇರಾನ್‌ನ ಆಂತರಿಕ ಶಕ್ತಿಯನ್ನು ಹೆಚ್ಚಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.








