ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿಯಾಗಿ ವೈದ್ಯ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಬೈಕ್ನಲ್ಲಿ ತೆರಳುತ್ತಿದ್ದ ಕೃತಿಕ (21) ಸಾವನಪ್ಪಿದ್ದು, ಆಕೆಯ ಜೊತೆ ತೆರಳುತ್ತಿದ್ದ ಮತ್ತೋರ್ವ ಯುವತಿ ಹಂಸ ಸ್ಥಿತಿ ಗಂಭೀರವಾಗಿದೆ. ನಿನ್ನೆ ಸಂಜೆ ಕಾಲೇಜು ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.ಆರ್ ಆರ್ ಮೆಡಿಕಲ್ ಕಾಲೇಜಿನಲ್ಲಿ ಕೃತಿಕಾ ವ್ಯಾಸಂಗ ಮಾಡುತ್ತಿದ್ದಳು.
ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದು ಕೆಳಗೆ ಇಬ್ಬರು ಬಿದ್ದಿದ್ದಾರೆ.ಈ ವೇಳೆ ಕೃತಿಕಾ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡ ಹಂಸಗೆ ರಾಜರಾಜೇಶ್ವರಿ ನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.








