Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಬೆಂಗಳೂರಿನ ನಿವಾಸಿ ಸೇರಿದಂತೆ 7 ಆರೋಪಿಗಳ ವಿರುದ್ಧ FIR ದಾಖಲು

BIG NEWS: ಬೆಂಗಳೂರು ಅಭಿವೃದ್ಧಿ ಖಾತೆ ಸ್ವೀಕರಿಸಲು ಕೃಷ್ಣ ಬೈರೇಗೌಡ ಹಿಂದೇಟು: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲೇ ಸಚಿವರ ಓಡಾಟ!

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಡಾನೆ ಹಾವಳಿ ತಡೆಗೆ ರೈಲ್ವೆ ಬ್ಯಾರಿಕೇಡ್: ಮಳವಳ್ಳಿ ಶಾಸಕರ ಪ್ರಶ್ನೆಗೆ ಸಚಿವ ಈಶ್ವರ ಖಂಡ್ರೆ ಭರವಸೆ
KARNATAKA

ಕಾಡಾನೆ ಹಾವಳಿ ತಡೆಗೆ ರೈಲ್ವೆ ಬ್ಯಾರಿಕೇಡ್: ಮಳವಳ್ಳಿ ಶಾಸಕರ ಪ್ರಶ್ನೆಗೆ ಸಚಿವ ಈಶ್ವರ ಖಂಡ್ರೆ ಭರವಸೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಮಳವಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಡಾನೆ ಹಾಗೂ ಚಿರತೆಗಳ ಹಾವಳಿ ಹೆಚ್ಚಾಗುತ್ತಿದ್ದು, ಜನವಸತಿ ಪ್ರದೇಶಗಳಿಗೆ ವನ್ಯಜೀವಿಗಳು ನುಗ್ಗದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮತ್ತು ಚಿರತೆ ಕಾರ್ಯಪಡೆ ರಚನೆಗೆ ಸರ್ಕಾರ ಮುಂದಾಗಿದೆ.

​ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಈ ವಿಷಯವನ್ನು ಪ್ರಸ್ತಾಪಿಸಿ, ಕಾವೇರಿ ನದಿ ತೀರದ ಮಳವಳ್ಳಿ ಮತ್ತು ಕನಕಪುರ ಭಾಗದಲ್ಲಿ ಆನೆಗಳ ಹಾವಳಿ ವಿಪರೀತವಾಗಿದೆ. ರೈಲ್ವೆ ಬ್ಯಾರಿಕೇಡ್ ಮತ್ತು ಸೋಲಾರ್ ಟೆಂಟಕಲ್ ಫೆನ್ಸಿಂಗ್ ಹಾಕದಿದ್ದರೆ ರೈತರ ಬೆಳೆ ಹಾನಿ ತಪ್ಪಿಸಲು ಸಾಧ್ಯವಿಲ್ಲ ಎಂದು ಸದನದ ಗಮನ ಸೆಳೆದರು. ಅಲ್ಲದೆ, ಕಳೆದ ಮೂರು ವರ್ಷಗಳಿಂದ ಈ ಭಾಗದಲ್ಲಿ ಆರ್‌ಎಫ್‌ಒ (RFO) ಹುದ್ದೆಗಳು ಖಾಲಿಯಿದ್ದು, ತಕ್ಷಣ ನೇಮಕಾತಿ ಮಾಡುವಂತೆ ಆಗ್ರಹಿಸಿದರು.

​ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ:

​ಶಾಸಕರ ಪ್ರಶ್ನೆಗೆ ಉತ್ತರಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ರಾಜ್ಯಾದ್ಯಂತ ಆನೆಗಳ ಹಾವಳಿ ತಡೆಗೆ ಪ್ರಸಕ್ತ ವರ್ಷ ಸುಮಾರು 201 ಕೋಟಿ ರೂ. ವೆಚ್ಚದಲ್ಲಿ 116 ಕಿ.ಮೀ. ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

​ಸಚಿವರ ಉತ್ತರದಲ್ಲಿನ ಮುಖ್ಯಾಂಶಗಳು:

  • ​ಮಳವಳ್ಳಿ ಕ್ಷೇತ್ರಕ್ಕೆ ಅನುದಾನ: ಮಳವಳ್ಳಿ ಭಾಗದಲ್ಲಿ 5.5 ಕಿ.ಮೀ. ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಈಗಾಗಲೇ 9.38 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಕಾಮಗಾರಿ ಶೀಘ್ರವೇ ಆರಂಭವಾಗಲಿದೆ.
  • ​ಆಧುನಿಕ ತಂತ್ರಜ್ಞಾನ: ವನ್ಯಜೀವಿಗಳ ಚಲನವಲನ ಗಮನಿಸಲು ಡ್ರೋನ್ ಕ್ಯಾಮೆರಾ, ಎಲಿಫೆಂಟ್ ಟಾಸ್ಕ್ ಫೋರ್ಸ್ ಹಾಗೂ ಕಮಾಂಡ್ ಸೆಂಟರ್‌ಗಳನ್ನು ಬಳಸಲಾಗುತ್ತಿದೆ.
  • ​ಚಿರತೆ ಕಾರ್ಯಪಡೆ: ಚಿರತೆಗಳ ಹಾವಳಿ ಹೆಚ್ಚಾಗಿರುವ ಕಡೆ ಪ್ರತ್ಯೇಕ ಕಾರ್ಯಪಡೆ ಹಾಗೂ ವಾಹನ ಸೌಲಭ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ.
  • ​ಹುದ್ದೆಗಳ ಭರ್ತಿ: ಖಾಲಿ ಇರುವ ಆರ್‌ಎಫ್‌ಒ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

​ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಸರ್ಕಾರ ಮೊದಲ ಆದ್ಯತೆ ನೀಡಿದ್ದು, ಅಗತ್ಯವಿರುವ ಕಡೆಗಳಲ್ಲಿ ಹೆಚ್ಚಿನ ರೈಲ್ವೆ ಬ್ಯಾರಿಕೇಡ್ ಅಳವಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…

Share. Facebook Twitter LinkedIn WhatsApp Email

Related Posts

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಬೆಂಗಳೂರಿನ ನಿವಾಸಿ ಸೇರಿದಂತೆ 7 ಆರೋಪಿಗಳ ವಿರುದ್ಧ FIR ದಾಖಲು

2 Mins Read

BIG NEWS: ಬೆಂಗಳೂರು ಅಭಿವೃದ್ಧಿ ಖಾತೆ ಸ್ವೀಕರಿಸಲು ಕೃಷ್ಣ ಬೈರೇಗೌಡ ಹಿಂದೇಟು: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲೇ ಸಚಿವರ ಓಡಾಟ!

2 Mins Read

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

3 Mins Read
Recent News

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಬೆಂಗಳೂರಿನ ನಿವಾಸಿ ಸೇರಿದಂತೆ 7 ಆರೋಪಿಗಳ ವಿರುದ್ಧ FIR ದಾಖಲು

BIG NEWS: ಬೆಂಗಳೂರು ಅಭಿವೃದ್ಧಿ ಖಾತೆ ಸ್ವೀಕರಿಸಲು ಕೃಷ್ಣ ಬೈರೇಗೌಡ ಹಿಂದೇಟು: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲೇ ಸಚಿವರ ಓಡಾಟ!

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

BIG NEWS : ಕೊಟ್ಟ ಸಾಲ ಮರಳಿ ಬರದಿದ್ದಕ್ಕೆ, ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ!

State News
KARNATAKA

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಬೆಂಗಳೂರಿನ ನಿವಾಸಿ ಸೇರಿದಂತೆ 7 ಆರೋಪಿಗಳ ವಿರುದ್ಧ FIR ದಾಖಲು

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ವಿದೇಶಿ ಹಣವನ್ನು ಅಕ್ರಮವಾಗಿ ಭಾರತಕ್ಕೆ ತಂದು, ಅದನ್ನು ನಕ್ಸಲ್ ಪೀಡಿತ ಪ್ರದೇಶಗಳು ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿನ ಸಂಘಟನಾತ್ಮಕ…

BIG NEWS: ಬೆಂಗಳೂರು ಅಭಿವೃದ್ಧಿ ಖಾತೆ ಸ್ವೀಕರಿಸಲು ಕೃಷ್ಣ ಬೈರೇಗೌಡ ಹಿಂದೇಟು: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲೇ ಸಚಿವರ ಓಡಾಟ!

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

BIG NEWS : ಕೊಟ್ಟ ಸಾಲ ಮರಳಿ ಬರದಿದ್ದಕ್ಕೆ, ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.