ಕೊಡಗು : ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಇಂದು ಕಾಡಾನೆ ದಾಳಿಗೆ ಕಾಫಿ ಬೆಳೆಗಾರನೊಬ್ಬ ಸಾವನಪ್ಪಿರುವ ಘಟನೆ ವರದಿಯಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಗಣಪತಿ ಅಲಿಯಾಸ್ ಗಪ್ಪು (49) ಸಾವನ್ನಪ್ಪಿರುವ ವ್ಯಕ್ತಿ. ಸಿದ್ದಾಪುರ ಸಮೀಪದ ಹೈಸ್ಕೂಲ್ ಪೈಸಾರಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








