Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

‘ದಿಗ್ಬಂಧನ ವಿಸ್ತರಣೆಗೂ ಮುನ್ನ ಒಪ್ಪಂದಕ್ಕೆ ಸಹಿ ಹಾಕಿ’: ಇರಾನ್‌ಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

29/04/2026 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್ ಘೋಷಣೆ
KARNATAKA

BIG NEWS: ರಾಜ್ಯದಲ್ಲಿ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್ ಘೋಷಣೆ

By kannadanewsnow0912/03/2026 4:46 PM

ಬೆಂಗಳೂರು : “ತುಂಗಭದ್ರಾ ಅಣೆಕಟ್ಟಿನ ಎಲ್ಲಾ ಕ್ರೆಸ್ಟ್ ಗೇಟ್ ಗಳ ಬದಲಾವಣೆ ಕಾರ್ಯವನ್ನು ನಮ್ಮ ಸರ್ಕಾರ ಆದ್ಯತೆ ಮೇರೆಗೆ ಕೈಗೆತ್ತಿಕೊಂಡಿದ್ದು, ಬರುವ ಮೇ ವೇಳೆಗೆ ಪೂರ್ಣಗೊಳಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು.

ವಿಧಾನ ಪರಿಷತ್ತಿನಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ಜೆಡಿಎಸ್ ನ ಟಿ.ಎ. ಶರವಣ ಅವರು ಟಿಬಿ ಅಣೆಕಟ್ಟು ಕ್ರೇಸ್ಟ್ ಗೇಟ್ ಅಳವಡಿಕೆ ವಿಚಾರ ಪ್ರಸ್ತಾಪಿಸಿದಾಗ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯಿಸಿದರು.

“ಮಾನ್ಯ ಶರವಣ ಅವರು ಬಹಳ ಬುದ್ಧಿವಂತರು ಎಂದು ಭಾವಿಸಿದ್ದೆ. ಅವರು ತುಂಗಭದ್ರಾ ಗೇಟ್ ಅಳವಡಿಕೆ ವಿಚಾರವನ್ನು ಪ್ರಸ್ತಾಪಿಸಿ, ಬೆಂಗಳೂರಿನಲ್ಲಿ ಮನೆ ಹಂಚಿಕೆ, ಕೇರಳದಲ್ಲಿ ಮನೆ ನಿರ್ಮಾಣ ಸೇರಿದಂತೆ ಅನೇಕ ಬೇರೆ ಬೇರೆ ವಿಚಾರಗಳನ್ನು ಎಳೆದು ತಂದಿದ್ದಾರೆ. ಟಿಬಿ ಅಣೆಕಟ್ಟಿನ ಗೇಟ್ ಅಳವಡಿಕೆ ವಿಚಾರ ಬಹಳ ಗಂಭೀರವಾದದು. ಶರವಣ ಹಾಗೂ ಇತರ ಸದಸ್ಯರನ್ನು ನಾನು ತುಂಗಭದ್ರಾ ಅಣೆಕಟ್ಟೆಗೆ ಕಳುಹಿಸಿ ಕೊಡುತ್ತೇನೆ, ಹೋಗಿ ನೋಡಲಿ. ಅಲ್ಲಿ ಕ್ರೆಸ್ಟ್ ಗೇಟ್ ತುಂಡರಿಸಿದಾಗ, ಅಣೆಕಟ್ಟು ಸಂಪೂರ್ಣ ಅಲ್ಲಾಡಿದಂತೆ ಭಾಸವಾಗಿತ್ತು. ನಾವು ಕೇವಲ 7 ದಿನಗಳಲ್ಲಿ ದುರಸ್ತಿ ಮಾಡಿದೆವು. ಆಗ ಜನಾರ್ದನ ರೆಡ್ಡಿ ಏನು ಹೇಳಿಕೆ ಕೊಟ್ಟಿದ್ದರು ಎಂಬುದು ಗೊತ್ತಿದೆ. ಆಗ ನಾನು ‘ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ’ ಎಂದು ಹೇಳಿದ್ದೆ. ನಂತರ ನಾವು ರಾಜ್ಯದ ಎಲ್ಲಾ ಅಣೆಕಟ್ಟುಗಳ ಅಧ್ಯಯನ ನಡೆಸಿ ಹಳೇ ಗೇಟ್ ಗಳ ಬದಲಾವಣೆಗೆ ತೀರ್ಮಾನ ಮಾಡಿದೆವು. ಮೊದಲ ಹಂತದಲ್ಲಿ ಟಿಬಿ ಡ್ಯಾಂ ಗೇಟ್ ಬದಲಿಸುತ್ತಿದ್ದೇವೆ. ಪತ್ರಿಕೆಯಲ್ಲಿ ಮಾರ್ಚ್ 10ರ ವೆರೆಗೆ 14 ಗೇಟ್ ಬದಲಿಸಲಾಗಿದ್ದು, ತಜ್ಞರ ಪ್ರಕಾರ ಒಂದು ಕ್ರೆಸ್ಟ್ ಗೇಟ್ ಅಳವಡಿಕೆಗೆ 7 ದಿನಗಳ ಕಾಲಾವಕಾಶ ಬೇಕು. ಹಲವು ಗೇಟ್ ಗಳ ಅಳವಡಿಕೆ ಕಾರ್ಯ ನಡೆದರೆ ಈ ಪ್ರಕ್ರಿಯೆ ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಲಿದೆ” ಎಂದು ತಿಳಿಸಿದರು.

“ಅಧ್ಯಕ್ಷರೇ ನಾವು ಎಲ್ಲಾ ಗೇಟ್ ಬದಲಿಸುವ ತೀರ್ಮಾನ ಮಾಡಿದ್ದು, 19ನೇ ಸ್ಟಾಪ್ ಲಾಗ್ ಗೇಟ್ ತೆರವುಗೊಳಿಸಿ ಸ್ಪಿಲ್ ಗೇಟ್ ಅಳವಡಿಕೆಗೆ 2025 ಏಪ್ರಿಲ್ 24ರಂದು ಅಹಮದಾಬಾದಿನ ಹಾರ್ಡ್ ವೇರ್ ಟೂಲ್ ಅಂಡ್ ಮಷಿನರಿ ಪ್ರಾಜೆಕ್ಟ್ ಸಂಸ್ಥೆ ಜತೆ ಒಪ್ಪಂದ ಮಾಡಿಕೊಳ್ಳಲಾಗಿದೆ. 34.48 ಕೋಟಿ ರೂ. ವೆಚ್ಚದಲ್ಲಿ ಉಳಿದ 32 ಸ್ಪಿಲ್ ವೇ ಗೇಟ್ ಅಳವಡಿಕೆಯನ್ನು 15 ತಿಂಗಳ ಕಾಲಾವಧಿಯಲ್ಲಿ ಪೂರ್ಣಗೊಳಸಲು ಇದೇ ಸಂಸ್ಥೆಯೊಂದಿಗೆ ಜೂನ್ 10, 2025ರಲ್ಲಿ ಒಪ್ಪಂದ ಮಾಡಿಕೊಂಡಿದ್ದೇವೆ. 25 ಗೇಟ್ ಗಳ ಫ್ಯಾಬ್ರಿಕೇಶನ್ ಕೆಲಸ ಮುಗಿದಿದ್ದು, 2 ಗೇಟ್ ಗಳ ಕೆಲಸ ನಡೆಯುತ್ತಿದೆ. 26 ಗೇಟ್ ಗಳನ್ನು ತೆಗೆಯಲಾಗಿದ್ದು, 2 ಗೇಟ್ ಗಳ ತೆರವು ಕಾರ್ಯ ನಡೆಯುತ್ತಿದೆ. ಇದರಲ್ಲಿ 14 ಗೇಟ್ ಗಳ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು, 3 ಗೇಟ್ ಗಳ ಕಾರ್ಯ ಪ್ರಕ್ರಿಯೆಯಲ್ಲಿದೆ. ಮೇ ತಿಂಗಳ ಒಳಗಾಗಿ ಎಲ್ಲಾ ಗೇಟ್ ಬದಲಾವಣೆ ಮುಗಿಸಲು ವ್ಯವಸ್ಥೆ ಮಾಡಲಾಗಿದೆ” ಎಂದು ವಿವರಿಸಿದರು.

ನವಲಿ: ಆಂಧ್ರ ಚರ್ಚೆಗೆ ಬರುತ್ತಿಲ್ಲ

“ಇನ್ನು ನವಲಿ ಸಮತೋಲಿತ ಜಲಾಶಯ ನಿರ್ಮಾಣ ವಿಚಾರದಲ್ಲಿ ಆಂಧ್ರ ಪ್ರದೇಶದವರು ಮಾತುಕತೆಗೆ ಬರುತ್ತಿಲ್ಲ. ಕೆಲವರು ಪರ್ಯಾಯ ಮಾರ್ಗಗಳ ಸಲಹೆ ನೀಡಿದ್ದು, ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು ಸಮಯ ನೀಡುತ್ತಿಲ್ಲ. ಈ ಅಣೆಕಟ್ಟು ನಮ್ಮ ಆಸ್ತಿ. ಈ ವಿಚಾರದಲ್ಲಿ ಕೇವಲ ಕರ್ನಾಟಕ ಏಕಾಂಗಿಯಾಗಿ ನಿರ್ಧಾರ ಮಾಡಲು ಸಾಧ್ಯವಿಲ್ಲ. ಮೂರು ರಾಜ್ಯದವರು ಸೇರಿ ತೀರ್ಮಾನ ಮಾಡಬೇಕು. ನೀರು ಹರಿದು ಸಮುದ್ರಕ್ಕೆ ಹೋಗುತ್ತಿದೆ. ಇದನ್ನು ಉಳಿಸಿ ಜನರಿಗೆ ನೀಡಲು ನಿಮ್ಮೆಲ್ಲರ ರಾಜಕೀಯ ಬದ್ಧತೆ, ಶಕ್ತಿ ನೀಡಿದರೆ ನಾವು ವ್ಯವಸ್ಥೆ ಮಾಡಬಹುದು. ಗೇಟ್ ಬದಲಾವಣೆ ವಿಚಾರವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಶೂನ್ಯ ವೇಳೆಯಲ್ಲಿ ಬಿ.ಜಿ. ಪಾಟೀಲ್ ಅವರು ಹಿನ್ನೀರ ಭೂ ಸಂತ್ರಸ್ತರಿಗೆ ಪರಿಹಾರ ಮರೀಚಿಕೆ ವಿಚಾರವಾಗಿ ಪತ್ರಿಕೆಯಲ್ಲಿ ಬಂದಿರುವ ವರದಿ ಬಗ್ಗೆ ಕೇಳಿದಾಗ, “ಮಾನ್ಯ ಸದಸ್ಯರು ಪ್ರಸ್ತಾಪಿಸಿರುವಂತೆ ರೈತರಿಗೆ ಭೂ ಪರಿಹಾರ ನೀಡುವ ಬಗ್ಗೆ ಅಧಿಕಾರಿಗಳಿಂದ ಕಡತ ತರಿಸಿಕೊಂಡು ಕೂಡಲೇ ಪರಿಹಾರ ಸಿಗುವಂತೆ ಮಾಡಲಾಗುವುದು” ಎಂದು ತಿಳಿಸಿದರು.

ಲವ್ ಜಿಹಾದ್ ಅಲ್ಲ, ಹಿಂದೂ ಸಂಪ್ರದಾಯದಂತೆ ಮದುವೆ: ಕುಂಭಮೇಳದ ‘ವೈರಲ್ ಬೆಡಗಿ’ ಮೊನಾಲಿಸಾ ಸ್ಪಷ್ಟನೆ

Share. Facebook Twitter LinkedIn WhatsApp Email

Related Posts

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM2 Mins Read

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM1 Min Read

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM1 Min Read
Recent News

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

‘ದಿಗ್ಬಂಧನ ವಿಸ್ತರಣೆಗೂ ಮುನ್ನ ಒಪ್ಪಂದಕ್ಕೆ ಸಹಿ ಹಾಕಿ’: ಇರಾನ್‌ಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

29/04/2026 9:08 PM

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM
State News
KARNATAKA

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

By kannadanewsnow0929/04/2026 9:47 PM KARNATAKA 2 Mins Read

ಶಿವಮೊಗ್ಗ: ಇಂದಿನ ಒತ್ತಡದ ಜೀವನಶೈಲಿ ಹಾಗೂ ವಯೋಸಹಜ ಕಾರಣಗಳಿಂದ ಅನೇಕರು ಶ್ರವಣ ದೋಷಕ್ಕೆ (ಕೇಳಿಸಿಕೊಳ್ಳುವ ಸಮಸ್ಯೆ) ಒಳಗಾಗುತ್ತಿದ್ದಾರೆ. ಇಂತಹವರಿಗೆ ನೆರವಾಗುವ…

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಕಾಂಪೌಂಡ್ ಕುಸಿದು 7 ಮಂದಿ ಬಲಿ; ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ

29/04/2026 8:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.