ರಾಜ್ಯದ ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ ಮಂಡಳಿ/ ಸ್ವಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ನೌಕರರು “ಸ್ವಯಂ ಪ್ರೇರಣೆಯಿಂದ” ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಸುತ್ತೋಲೆಯಲ್ಲಿ ಸೂಚಿಸಿರುತ್ತಾರೆ.
ಆದ್ದರಿಂದ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರುಗಳಿಗೆ ಖಾದಿ ಬಟ್ಟೆಗಳನ್ನು ಖರೀದಿಸಲು ಸುಲಭವಾಗಿ ಲಭ್ಯವಾಗುವಂತೆ ಮಾರ್ಚ್ 15 ರಂದು ಕೃಷಿ ಇಲಾಖೆ ವತಿಯಿಂದ ಆಯೋಜಿಸಿರುವ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಕಾರ್ಯಕ್ರಮದಲ್ಲಿ ಕೃಷಿ ವಸ್ತು ಪ್ರದರ್ಶನದ ಜೊತೆಗೆ ಬೆಳಗ್ಗೆ 9.30 ರಿಂದ ಸಂಜೆ 5 ರವರೆಗೆ ಗಾಂಧಿ ಮೈದಾನ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ತಾತ್ಕಾಲಿಕ ಖಾದಿ ಮಳಿಗೆಯನ್ನು ತೆರೆಯಲಾಗುತ್ತಿದೆ.
ಆದ್ದರಿಂದ ಜಿಲ್ಲೆಯ ಎಲ್ಲಾ ಇಲಾಖೆ/ ನಿಗಮ/ ಮಂಡಳಿ ಅಧಿಕಾರಿಗಳು ಹಾಗೂ ನೌಕರರುಗಳು ಈ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಮಡಿಕೇರಿ, ಕೊಡಗು ಜಿಲ್ಲೆಯ ಜಿಲ್ಲಾ ಅಭಿವೃದ್ಧಿ ಅಧಿಕಾರಿಗಳಾದ ಹೆಚ್.ಆರ್.ಸುಧಾಮ ರವರು ಕೋರಿದ್ದಾರೆ.








