ಉತ್ತರಕನ್ನಡ : ಪೋಷಕರು ಬುದ್ಧಿ ಮಾತು ಹೇಳಿದ್ದಕ್ಕೆ 15 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಗಣೇಶನಗರದಲ್ಲಿ ನಡೆದಿದೆ.
ಮೊಬೈಲ್ ಬಿಟ್ಟು ಓದಿನ ಕಡೆಗೆ ಗಮನಹರಿಸಲು ಪೋಷಕರು ಬುದ್ದಿಮಾತು ಹೇಳಿದ್ದರು. ಇದರಿಂದ ಮನನೊಂದು ಒಂಬತ್ತನೇ ತರಗತಿ ವಿದ್ಯಾರ್ಥಿ ಶುಭಂ (15) ಆತ್ಮಹತ್ಯೆಗೆ ಶರಣಾಗಿದ್ದಾನೆ. ಪೋಷಕರು ಮೊಬೈಲ್ ಬಿಟ್ಟು ಓದು ಎಂದು ಕಿವಿಮಾತು ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮಾರಿಕಾಂಬ ಪ್ರೌಢ ಶಾಲೆಯಲ್ಲಿ ಶುಭಂ ನಾಗೇಶ್ ನಾಯಕ್ 9ನೇ ತರಗತಿಯಲ್ಲಿ ಓದುತ್ತಿದ್ದ.
ಪರೀಕ್ಷೆ ಸಮಯದಲ್ಲಿ ಮೊಬೈಲ್ ನೋಡಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಾರೆ ಇದರಿಂದ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿದ್ಯಾರ್ಥಿ ಶುಭಂ ನೇಣಿಗೆ ಶರಣಾಗಿದ್ದಾನೆ. ತಕ್ಷಣ ಟಿಎಸ್ಎಸ್ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ . ಈ ಕುರಿತು ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








