ದಾವಣಗೆರೆ : ದಾವಣಗೆರೆಯಲ್ಲಿ ಇತ್ತೀಚಿಗೆ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಖಾಸಗಿ ಆಸ್ಪತ್ರೆ ನರ್ಸ್ ಎಂದು ಹೇಳಿಕೊಂಡು ಕಷ್ಟ ಅಂತ ಹೇಳಿಕೊಂಡು ಉದ್ಯಮಿ ಹನಿಟ್ರ್ಯಾಪ್ ಮಾಡಲು ಹೋಗಿದ್ದ ಮಹಿಳೆ ಮತ್ತು ಆಕೆಯ ಜತೆಗೆ ಇದ್ದ ವ್ಯಕ್ತಿಗಳು ಇದೀಗ ತಮ್ಮ ತಪ್ಪಿನ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡ ಇದೆ ಎಂದು ಹೇಳಿದ್ದಾರೆ.
ಆರೋಪ ಹೊತ್ತಿರುವ ಬಿಳಿಚೋಡು ಚನ್ನಬಸಪ್ಪ ಮತ್ತು ಸಂಬಂಧಪಟ್ಟ ಮಹಿಳೆ ಇಂದು ಸುದ್ದಿಗೋಷ್ಠಿ ನಡೆಸಿ, ನಾವು ಹನಿಟ್ರ್ಯಾಪ್ ಮಾಡಿಲ್ಲ, ಬದಲಾಗಿ ನಮ್ಮನ್ನು ಪ್ರಭಾವಿಗಳು ಸಂಚು ರೂಪಿಸಿ ಸಿಲುಕಿಸಿದ್ದಾರೆ” ಎಂದು ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕಣ್ಣೀರು ಹಾಕಿದ ಮಹಿಳೆ, ಓರ್ವ ಪ್ರಭಾವಿ ವ್ಯಕ್ತಿಯಿಂದ ನಮಗೆ ತೊಂದರೆಯಾಗಿತ್ತು.
ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕು. ಬಡ ಹೆಣ್ಣು ಮಕ್ಕಳ ಮತ್ತು ಸಾಮಾನ್ಯ ಜನರ ಜೀವನದ ಜೊತೆ ಆಟವಾಡುವ ಪ್ರಭಾವಿಗಳಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಆರೋಪಿತರು ಪೂರ್ವ ವಲಯ ಐಜಿಪಿ (IGP) ಅವರಿಗೆ ಸಮಗ್ರ ತನಿಖೆ ಕೋರಿ ಮನವಿ ಸಲ್ಲಿಸಿದ್ದಾರೆ.ಈ ಹಿಂದೆ ಇದೇ ಪ್ರಕರಣದಲ್ಲಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಲಾಗುತ್ತಿದೆ ಎಂದು ದೂರು ದಾಖಲಾಗಿತ್ತು. ಆದರೆ ಈಗ ಆರೋಪಿಗಳೇ ತಿರುಗಿಬಿದ್ದು ತಮಗಾದ ಅನ್ಯಾಯದ ಬಗ್ಗೆ ದ್ವನಿ ಎತ್ತಿರುವುದು ಪ್ರಕರಣವನ್ನು ಮತ್ತಷ್ಟು ನಿಗೂಢಗೊಳಿಸಿದೆ.
ಈ ಬಗ್ಗೆ ನ್ಯಾಯ ಪಡೆಯಲು ನಾವು ವಕೀಲರ ಮನೆಗೆ ಹೋಗಿದ್ದೆವು. ಆದರೆ ಆ ವ್ಯಕ್ತಿ ತನ್ನ ಕೃತ್ಯ ಎಲ್ಲಿ ಬಹಿರಂಗವಾಗುತ್ತದೆಯೋ ಎಂಬ ಭಯದಿಂದ, ತಾನೇ ನನ್ನ ಮಾನಭಂಗ ಮಾಡಿ ಈಗ ಪೊಲೀಸರ ಮೂಲಕ ನಮ್ಮನ್ನು ಬಂಧಿಸುವಂತೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ. “ನಮ್ಮ ಮೇಲಿನ ಹಳೆಯ ದ್ವೇಷ ತೀರಿಸಿಕೊಳ್ಳಲು ಪೊಲೀಸ್ ಅಧಿಕಾರಿಯೊಬ್ಬರು ಈ ಕೃತ್ಯಕ್ಕೆ ಸಾಥ್ ನೀಡಿದ್ದಾರೆ. ಹನಿಟ್ರ್ಯಾಪ್ ಎಂಬ ಹಣೆಪಟ್ಟಿ ಕಟ್ಟಿ ನಮ್ಮ ಜೀವನದ ಜೊತೆ ಆಟವಾಡಲಾಗುತ್ತಿದೆ” ಎಂದು ಬಿಳಿಚೋಡು ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.








