ಬೆಂಗಳೂರು: ಗೃಹ ಬಳಕೆಗಾಗಿ ವಿತರಿಸಲಾಗುವ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಳಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಎಚ್ಚರಿಕೆ ನೀಡಿದೆ. ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಸೂಚನೆ ಮೇರೆಗೆ ಇಲಾಖೆಯು ಈ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ರಾಜ್ಯಾಾದ್ಯಂತ ಭಾರಿ ಜಪ್ತಿ ಕಾರ್ಯಾಚರಣೆ
ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಸಿಲಿಂಡರ್ ಬಳಸುತ್ತಿದ್ದ ಅಡ್ಡೆಗಳ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ದೊಡ್ಡ ಮಟ್ಟದಲ್ಲಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ:
-
ಬೆಂಗಳೂರು: ಪೀಣ್ಯದಲ್ಲಿ 45 ಹಾಗೂ ಚಿಕ್ಕಜಾಲದಲ್ಲಿ 209 ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ.
-
ಯಾದಗಿರಿ: ಜಿಲ್ಲೆಯಲ್ಲಿ 46 ಗೃಹ ಬಳಕೆ ಸಿಲಿಂಡರ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
-
ಶಿವಮೊಗ್ಗ ಮತ್ತು ದಾವಣಗೆರೆ: ಶಿವಮೊಗ್ಗದಲ್ಲಿ 3 ಮತ್ತು ದಾವಣಗೆರೆಯಲ್ಲಿ 13 ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ.
-
ಕೋಲಾರ: ಕೆಜಿಎಫ್‌ನಲ್ಲಿ ಅಕ್ರಮವಾಗಿ ಸಿಲಿಂಡರ್ ರೀ-ಫಿಲ್ಲಿಂಗ್ ಮಾಡುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿ, ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಎಲ್ಲಾ ಅಕ್ರಮ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿಯಲ್ಲಿ ಕೇಸ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.
ಸಿಲಿಂಡರ್ ವಿತರಣೆ ಮತ್ತು ಮಾರ್ಗಸೂಚಿ
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಪೂರೈಕೆಗೆ ಕ್ರಮ ವಹಿಸಲಾಗಿದ್ದು, ವಿತರಣಾ ವಿವರಗಳು ಇಂತಿವೆ:
-
ಒಟ್ಟು ವಾಣಿಜ್ಯ ಬಳಕೆಯ ಸಿಲಿಂಡರ್‌ಗಳಲ್ಲಿ ಶೇ. 20ರಷ್ಟನ್ನು ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ವಿಮಾನ ನಿಲ್ದಾಣ, ರೈಲ್ವೆ ಮತ್ತು ಬಸ್ ನಿಲ್ದಾಣಗಳ ಕ್ಯಾಂಟೀನ್‌ಗಳಿಗೆ ಪೂರೈಸಲಾಗುವುದು.
-
ಪ್ರಮುಖ ದೇವಸ್ಥಾನಗಳ ಪ್ರಸಾದ ತಯಾರಿಕೆ, ಸರ್ಕಾರಿ ಕಚೇರಿಗಳು, ವೃದ್ಧಾಶ್ರಮ ಹಾಗೂ ಪ್ರಮುಖ ಖಾಸಗಿ ಕಚೇರಿಗಳಿಗೆ ವಿತರಣೆ ಮಾಡಲಾಗುತ್ತಿದೆ.
-
ರಾಜ್ಯಾಾದ್ಯಂತ ಈವರೆಗೆ 3,86,363 ಗೃಹ ಬಳಕೆ (14.2 ಕೆಜಿ) ಸಿಲಿಂಡರ್ ಹಾಗೂ 6,371 ವಾಣಿಜ್ಯ ಬಳಕೆ ಸಿಲಿಂಡರ್‌ಗಳನ್ನು ವಿತರಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಸಾರ್ವಜನಿಕರು ಮತ್ತು ವ್ಯಾಪಾರಸ್ಥರು ಗೃಹ ಬಳಕೆ ಸಿಲಿಂಡರ್‌ಗಳನ್ನು ಕಾನೂನುಬಾಹಿರವಾಗಿ ಬಳಸದಂತೆ ಇಲಾಖೆ ಮತ್ತೊಮ್ಮೆ ಎಚ್ಚರಿಸಿದೆ.
ಭಕ್ತರ ದಶಕಗಳ ಕನಸು ನನಸು; ಮಾ.30ರಂದು ಸೊರಬದ ಶ್ರೀರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ
ಮೊಸರು ಬೇಗನೆ ಹಾಳಾಗುತ್ತದೆಯೇ? ಹೀಗೆ ಸಂಗ್ರಹಿಸಿದರೆ, ಒಂದು ವಾರ ತಾಜಾವಾಗಿರುತ್ತದೆ!








