ಮಂಗಳೂರು : ರಾಜ್ಯಾದ್ಯಂತ ಗ್ಯಾಸ್ ಸಿಲಿಂಡರ್ ಇಲ್ಲದೆ ಜನರು ಪರದಾಡುತ್ತಿದ್ದಾರೆ. ಮತ್ತೊಂದು ಕಡೆ ಬೆಂಗಳೂರು ಮುಂಬೈ ಮಹಾನಗರಗಳಲ್ಲಿ ವಾಣಿಜ್ಯ ಸಿಲಿಂಡರ್ ಇಲ್ಲದೆ ಹೋಟೆಲ್ ಗಳು ಸಂಪೂರ್ಣವಾಗಿ ಬಂದ್ ಆಗಿವೆ. ಇದರ ಮಧ್ಯ ಇಂದು ಮಂಗಳೂರಿನಲ್ಲಿ ಗ್ಯಾಸ್ ಟ್ಯಾಂಕರ್ ಒಂದು ಮಗುಚಿಬಿದ್ದು ಸೋರಿಕೆ ಆಗಿರುವ ಘಟನೆ ವರದಿಯಾಗಿದೆ.
ಹೌದು ಗ್ಯಾಸ್ ಸಮಸ್ಯೆ ಬಂದೇ ಟ್ಯಾಂಕರ್ ಒಂದು ಉರುಳಿ ಬಿದ್ದಿದೆ. ಮಂಗಳೂರಿನಿಂದ ಎಲ್ಪಿಜಿ ತರುತ್ತಿದ್ದ ಟ್ಯಾಂಕರ್ ಮಗುಚಿ ಬಿದ್ದಿದೆ. ಉಡುಪಿ ಕಟ್ಟಪಾಡಿಯಲ್ಲಿ ಗ್ಯಾಸ್ ಟ್ಯಾಂಕರ್ ಮಗುಚಿ ಬಿದ್ದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಧಾವಿಸಿದ್ದಾರೆ. ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.








