ನವದೆಹಲಿ : ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದ ಹಿನ್ನೆಲೆಯಲ್ಲಿ, ಇದೀಗ ದುಬೈ ಏರ್ಪೋರ್ಟ್ ನಲ್ಲಿ ವಿಮಾನಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ದುಬೈಗೆ ಇಂದು ಏರ್ ಇಂಡಿಯಾ ವಿಮಾನಗಳನ್ನು ರದ್ದುಗೊಳಿಸಿದೆ.
ದುಬೈಗೆ ತೆರಳುವ ಮತ್ತು ದುಬೈನಿಂದ ಆಗಮಿಸುವ ಎಲ್ಲಾ ಇಂಡಿಯಾ ಅಭಿಮಾನಿಗಳನ್ನು ಕ್ಯಾನ್ಸಲ್ ಮಾಡಲಾಗಿದೆ. ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ರದ್ದುಗೊಳಿಸಲಾಗಿದೆ. ಡ್ರೋನ್ ದಾಳಿಯಿಂದಾಗಿ ಇಂಧನ ಟ್ಯಾಂಕಿಗೆ ಬೆಂಕಿ ಹೊತ್ತಿಕೊಂಡಿತ್ತು. ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಇಂಧನ ಟ್ಯಾಂಕಿಗೆ ಬೆಂಕಿ ಹತ್ತಿಕೊಂಡಿತ್ತು. ಹೀಗಾಗಿ ಎಲ್ಲಾ ವಿಮಾನಗಳನ್ನು ಇದೀಗ ರದ್ದುಗೊಳಿಸಲಾಗಿದೆ.








