Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: 2026-27ನೇ ಸಾಲಿನ 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ರಾಹಕರೇ ಗಮನಿಸಿ : `LPG’ ಸಿಲಿಂಡರ್ ಬೇಕಿದ್ರೆ `ಕೆವೈಸಿ’ ನೀಡುವುದು ಕಡ್ಡಾಯ 
KARNATAKA

ಗ್ರಾಹಕರೇ ಗಮನಿಸಿ : `LPG’ ಸಿಲಿಂಡರ್ ಬೇಕಿದ್ರೆ `ಕೆವೈಸಿ’ ನೀಡುವುದು ಕಡ್ಡಾಯ 

By kannadanewsnow57

ನವದೆಹಲಿ: ಜಾಗತಿಕ ಮಟ್ಟದಲ್ಲಿ ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದಿಂದಾಗಿ ದೇಶದಲ್ಲಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ಮಹತ್ವದ ಸೂಚನೆಯೊಂದನ್ನು ನೀಡಿದ್ದು, ಮಾರ್ಚ್ 15ರಿಂದ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಅಥವಾ ಕೆವೈಸಿ (KYC) ಮಾಡಿಸುವುದನ್ನು ಕಡ್ಡಾಯಗೊಳಿಸಿದೆ.

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಪ್ರಕಾರ, ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಗ್ರಾಹಕರಿಗೆ ಮಾತ್ರ ಇನ್ನು ಮುಂದೆ ಎಲ್‌ಪಿಜಿ ಸೇವೆಗಳು ಮತ್ತು ಸಬ್ಸಿಡಿ ಸೌಲಭ್ಯಗಳು ದೊರೆಯಲಿವೆ. ಗ್ರಾಹಕರು ಗ್ಯಾಸ್ ಏಜೆನ್ಸಿಗಳಿಗೆ ಅಲೆಯುವ ಬದಲು, ಮನೆಯಲ್ಲೇ ಕುಳಿತು ಮೊಬೈಲ್ ಆ್ಯಪ್ ಮೂಲಕ ಸುಲಭವಾಗಿ ಈ ಪ್ರಕ್ರಿಯೆ ಮುಗಿಸಲು ಅವಕಾಶ ಕಲ್ಪಿಸಲಾಗಿದೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL), ಭಾರತ್ ಪೆಟ್ರೋಲಿಯಂ (BPCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ (HPCL) ಕಂಪನಿಗಳ ಎಲ್ಲಾ ಗ್ರಾಹಕರಿಗೂ ಈ ಹೊಸ ನಿಯಮ ಅನ್ವಯವಾಗಲಿದೆ.

ಕೆವೈಸಿ ಪ್ರಕ್ರಿಯೆ ಮಾಡುವುದು ಹೇಗೆ?

ನಿಮ್ಮ ಮೊಬೈಲ್ ಮೂಲಕ ಕೆವೈಸಿ ಪೂರ್ಣಗೊಳಿಸಲು ಈ ಹಂತಗಳನ್ನು ಅನುಸರಿಸಿ:

ಲಿಂಕ್ ಅಥವಾ ಕ್ಯೂಆರ್ ಕೋಡ್: ಸರ್ಕಾರಿ ನೋಟಿಸ್‌ನಲ್ಲಿ ನೀಡಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಅಧಿಕೃತ ವೆಬ್‌ಸೈಟ್ https://www.pmuy.gov.in/e&kyc.html ಮೂಲಕ ಪ್ರಕ್ರಿಯೆ ಆರಂಭಿಸಿ.

ಆ್ಯಪ್ ಡೌನ್‌ಲೋಡ್: ಮೊಬೈಲ್‌ನಲ್ಲಿ ‘Aadhaar FaceRD’ ಆ್ಯಪ್ ಜೊತೆಗೆ ನಿಮ್ಮ ಗ್ಯಾಸ್ ಕಂಪನಿಯ ಅಧಿಕೃತ ಆ್ಯಪ್ (IOCL, BPCL ಅಥವಾ HPCL) ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಮುಖ ಚಹರೆ ಸ್ಕ್ಯಾನ್: ಕಂಪನಿಯ ಆ್ಯಪ್‌ನಲ್ಲಿ ನೀಡಲಾದ ಸೂಚನೆಗಳನ್ನು ಪಾಲಿಸಿ, ‘Aadhaar FaceRD’ ಆ್ಯಪ್ ಬಳಸಿ ನಿಮ್ಮ ಮುಖವನ್ನು ಸ್ಕ್ಯಾನ್ ಮಾಡುವ ಮೂಲಕ ಬಯೋಮೆಟ್ರಿಕ್ ದೃಢೀಕರಣ ನೀಡಿ.

ದೃಢೀಕರಣ: ಈ ಪ್ರಕ್ರಿಯೆ ಯಶಸ್ವಿಯಾದ ನಂತರ ನಿಮ್ಮ ಕೆವೈಸಿ ದೃಢೀಕರಣ ಪೂರ್ಣಗೊಳ್ಳುತ್ತದೆ.

Consumers take note: If you want an LPG cylinder it is mandatory to provide KYC.
Share. Facebook Twitter LinkedIn WhatsApp Email

Related Posts

BIG NEWS: 2026-27ನೇ ಸಾಲಿನ 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ

2 Mins Read

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

2 Mins Read

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

2 Mins Read
Recent News

BIG NEWS: 2026-27ನೇ ಸಾಲಿನ 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

State News
KARNATAKA

BIG NEWS: 2026-27ನೇ ಸಾಲಿನ 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ​ಕರ್ನಾಟಕ ಸರ್ಕಾರವು 2026-27ನೇ ಶೈಕ್ಷಣಿಕ ಸಾಲಿನಲ್ಲಿ ಒಂದನೇ ತರಗತಿಗೆ (Class 1) ಮಕ್ಕಳನ್ನು ದಾಖಲಿಸಲು ನಿಗದಿಪಡಿಸಲಾಗಿದ್ದ ಕನಿಷ್ಠ ವಯೋಮಿತಿಯಲ್ಲಿ…

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.