ಹುಬ್ಬಳ್ಳಿ : ರೈಲ್ವೆ ಇಲಾಖೆ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ ಹಿನ್ನೆಲೆಯಲ್ಲಿ, ಗೂಡ್ಸ್ ರೈಲ್ವೆ ಮ್ಯಾನೇಜರ್ ಮತ್ತು ಎಲ್ಡಿಸಿ ಹುದ್ದೆಗಳ ಪರೀಕ್ಷೆಗೆ ರೈಲ್ವೆ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡದಲ್ಲಿ ಬರೆಯಲು ಅವಕಾಶ ಇಲ್ಲ.
ಕೇವಲ ಹಿಂದಿ ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಹಿನ್ನೆಲೆಯಲ್ಲಿ, ರೈಲ್ವೆ ಇಲಾಖೆ ಕ್ರಮ ಖಂಡಿಸಿ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಿದರು. ಹುಬ್ಬಳ್ಳಿಯ ರೈಲ್ವೆ ವಿಭಾಗಿಯ ಕಚೇರಿಗೆ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕನ್ನಡ ಭಾಷೆಯನ್ನು ಕಡೆಗಣಿಸಿದ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದ್ದಾರೆ.








