Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ತೈಲ ಉಳಿಸಲು ಶ್ರೀಲಂಕಾ ಮಾಸ್ಟರ್ ಪ್ಲಾನ್: ಇನ್ನು ಮುಂದೆ ಪ್ರತಿ ಬುಧವಾರ ಸರ್ಕಾರಿ ರಜೆ ಘೋಷಣೆ!

17/03/2026 10:49 AM

ಋತುಚಕ್ರದ ರಜೆ ವೇಳೆ, ಉದ್ಯೋಗ ಸಂಸ್ಥೆಗಳಿಗೆ ಶೋಕಾಸ್ ನೋಟಿಸ್ ನೀಡುವಂತಿಲ್ಲ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ!

17/03/2026 10:48 AM

BREAKING : ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ : ಇಂದು ನಡೆಯಬೇಕಿದ್ದ `ಮುಂಬಡ್ತಿ ಪರೀಕ್ಷೆ’ ಮುಂದೂಡಿಕೆ!

17/03/2026 10:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಋತುಚಕ್ರದ ರಜೆ ವೇಳೆ, ಉದ್ಯೋಗ ಸಂಸ್ಥೆಗಳಿಗೆ ಶೋಕಾಸ್ ನೋಟಿಸ್ ನೀಡುವಂತಿಲ್ಲ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ!
KARNATAKA

ಋತುಚಕ್ರದ ರಜೆ ವೇಳೆ, ಉದ್ಯೋಗ ಸಂಸ್ಥೆಗಳಿಗೆ ಶೋಕಾಸ್ ನೋಟಿಸ್ ನೀಡುವಂತಿಲ್ಲ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ!

By kannadanewsnow0517/03/2026 10:48 AM

ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯಿದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ನೀಡುವ ಉದ್ಯೋಗದಾತರಿಗೆ ಶೋಕಾಸ್‌ ನೋಟಿಸ್‌ ನೀಡಬಾರದು ಎಂದು ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.

ರಾಜ್ಯ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಕರ್ನಾಟಕ ಉದ್ಯೋಗದಾತರ ಸಂಘ, ಬೆಂಗಳೂರು ಹೋಟೆಲ್‌ಗಳ ಸಂಘ ಮತ್ತಿತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗ್ಡೆ ಅವರಿದ್ದ ಪೀಠ ಈ ಸೂಚನೆ ನೀಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಸರ್ಕಾರ ಹೊರಡಿಸಿರುವ ಅಧಿಸೂಚನೆ ಜಾರಿಗೆ ಸಂಬಂಧಿಸಿದಂತೆ ಸರ್ಕಾರ ಶೋಕಾಸ್‌ ನೋಟಿಸ್‌ ನೀಡುತ್ತಿದೆ. ಇದರಿಂದ ಉದ್ಯೋಗದಾತರಿಗೆ ತೊಂದರೆಯಾಗುತ್ತಿದೆ ಎಂದರು.

ಇದಕ್ಕೆ ಪೀಠ, ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿದೆ. ಹೀಗಿರುವಾಗ ಉದ್ಯೋಗದಾತರಿಗೆ ಶೋಕಾಸ್‌ ನೋಟಿಸ್‌ ನೀಡುವುದು ಏಕೆ ಎಂದು ಪ್ರಶ್ನಿಸಿತು. ಅಲ್ಲದೇ ಶೋಕಾಸ್‌ ನೋಟಿಸ್‌ಗಳಿಗೆ ತಡೆ ನೀಡಬೇಕಾಗುತ್ತದೆ ಎಂದು ತಿಳಿಸಿತು. ಜತೆಗೆ, ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ತಿಳಿಸಿತು.

ನ್ಯಾಯಾಲಯದ ಪ್ರಮುಖ ಅಂಶಗಳು:

ಘನತೆಯ ಹಕ್ಕು: ಋತುಚಕ್ರವು ನೈಸರ್ಗಿಕ ಪ್ರಕ್ರಿಯೆಯಾಗಿದ್ದು, ಆ ಸಮಯದಲ್ಲಿ ವಿಶ್ರಾಂತಿ ಪಡೆಯುವುದು ಮಹಿಳೆಯರ ಸಾಂವಿಧಾನಿಕ ಹಕ್ಕು. ಆ ಅವಧಿಯಲ್ಲಿ ಅವರ ಮೇಲೆ ಶಿಸ್ತು ಕ್ರಮ ಅಥವಾ ನೋಟಿಸ್ ಜಾರಿ ಮಾಡುವುದು ಮಾನಸಿಕ ಕಿರುಕುಳಕ್ಕೆ ಸಮಾನ.

ಸರ್ಕಾರಕ್ಕೆ ನಿರ್ದೇಶನ: ಎಲ್ಲಾ ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸಂಸ್ಥೆಗಳು ಈ ನಿಯಮವನ್ನು ಪಾಲಿಸುವಂತೆ ನೋಡಿಕೊಳ್ಳಲು ಸರ್ಕಾರಕ್ಕೆ ಸೂಚಿಸಲಾಗಿದೆ.

ಸಂವೇದನಾಶೀಲತೆ: ಉದ್ಯೋಗದಾತರು ಮಹಿಳಾ ಉದ್ಯೋಗಿಗಳ ಆರೋಗ್ಯದ ಬಗ್ಗೆ ಸಂವೇದನಾಶೀಲರಾಗಿರಬೇಕು. ರಜೆಯ ಅವಧಿಯನ್ನು ಅವರ ಕೆಲಸದ ದಕ್ಷತೆಗೆ ಅಳತೆಗೋಲು ಮಾಡಬಾರದು.

Share. Facebook Twitter LinkedIn WhatsApp Email

Related Posts

BREAKING : ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ : ಇಂದು ನಡೆಯಬೇಕಿದ್ದ `ಮುಂಬಡ್ತಿ ಪರೀಕ್ಷೆ’ ಮುಂದೂಡಿಕೆ!

17/03/2026 10:40 AM1 Min Read

BREAKING : ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ : ಇಂದು ನಡೆಯಬೇಕಿದ್ದ ಪರೀಕ್ಷೆಗಳು ಮುಂದೂಡಿಕೆ!

17/03/2026 10:28 AM1 Min Read

BREAKING : ರಾಜ್ಯದಲ್ಲಿ ಘೋರ ದುರಂತ : 50 ಅಡಿ ಆಳದ ಬಾವಿಗೆ ಬಿದ್ದ 2 ವರ್ಷದ ಮಗು, ತನ್ನ ಪ್ರಾಣ ಲೆಕ್ಕಿಸದೆ ರಕ್ಷಿಸಿದ ವ್ಯಕ್ತಿ!

17/03/2026 10:21 AM1 Min Read
Recent News

​ತೈಲ ಉಳಿಸಲು ಶ್ರೀಲಂಕಾ ಮಾಸ್ಟರ್ ಪ್ಲಾನ್: ಇನ್ನು ಮುಂದೆ ಪ್ರತಿ ಬುಧವಾರ ಸರ್ಕಾರಿ ರಜೆ ಘೋಷಣೆ!

17/03/2026 10:49 AM

ಋತುಚಕ್ರದ ರಜೆ ವೇಳೆ, ಉದ್ಯೋಗ ಸಂಸ್ಥೆಗಳಿಗೆ ಶೋಕಾಸ್ ನೋಟಿಸ್ ನೀಡುವಂತಿಲ್ಲ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ!

17/03/2026 10:48 AM

BREAKING : ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ : ಇಂದು ನಡೆಯಬೇಕಿದ್ದ `ಮುಂಬಡ್ತಿ ಪರೀಕ್ಷೆ’ ಮುಂದೂಡಿಕೆ!

17/03/2026 10:40 AM

ರಾಜ್ಯಸಭಾ ಚುನಾವಣೆ 2026: ಬಿಹಾರದಲ್ಲಿ ಎನ್‌ಡಿಎ ಕ್ಲೀನ್ ಸ್ವೀಪ್; ಒಡಿಶಾ ಮತ್ತು ಹರಿಯಾಣದ ವಿಜೇತರ ಪೂರ್ಣ ಪಟ್ಟಿ ಇಲ್ಲಿದೆ

17/03/2026 10:29 AM
State News
KARNATAKA

ಋತುಚಕ್ರದ ರಜೆ ವೇಳೆ, ಉದ್ಯೋಗ ಸಂಸ್ಥೆಗಳಿಗೆ ಶೋಕಾಸ್ ನೋಟಿಸ್ ನೀಡುವಂತಿಲ್ಲ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ!

By kannadanewsnow0517/03/2026 10:48 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯಿದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ…

BREAKING : ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ : ಇಂದು ನಡೆಯಬೇಕಿದ್ದ `ಮುಂಬಡ್ತಿ ಪರೀಕ್ಷೆ’ ಮುಂದೂಡಿಕೆ!

17/03/2026 10:40 AM

BREAKING : ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ : ಇಂದು ನಡೆಯಬೇಕಿದ್ದ ಪರೀಕ್ಷೆಗಳು ಮುಂದೂಡಿಕೆ!

17/03/2026 10:28 AM

BREAKING : ರಾಜ್ಯದಲ್ಲಿ ಘೋರ ದುರಂತ : 50 ಅಡಿ ಆಳದ ಬಾವಿಗೆ ಬಿದ್ದ 2 ವರ್ಷದ ಮಗು, ತನ್ನ ಪ್ರಾಣ ಲೆಕ್ಕಿಸದೆ ರಕ್ಷಿಸಿದ ವ್ಯಕ್ತಿ!

17/03/2026 10:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.