ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಹಲವಾರು ಜನ ಪ್ರಾಣ ಕಳೆದುಕೊಂಡಿದ್ದಾರೆ ಇದೀಗ ನಿನ್ನೆ ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಕಿಲ್ಲರ್ ಬಿಎಂಟಿಸಿಗೆ ಬೆಂಗಳೂರಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ನೆಲಮಂಗಲದಲ್ಲಿ ಬಿಎಂಟಿಸಿ ಬಸ್ ಗೆ ಗೃಹಿಣಿ ಒಬ್ಬರು ಬಲಿಯಾಗಿದ್ದಾರೆ.
ಯಾದಗಿರಿ ಮೂಲದ 30 ವರ್ಷದ ಲಕ್ಷ್ಮಿ ಮೃತ ಮಹಿಳೆ ಎಂದು ತಿಳಿದು ಬಂದಿದೆ. ಮೃತ ಲಕ್ಷ್ಮೀ ಗಾರ್ಮೆಂಟ್ಸ್ ಅಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ವಾಪಸ್ ಬರುವಾಗ ಲಕ್ಷ್ಮಿ ಅವರಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಲಕ್ಷ್ಮಿ ಸಾವನಪ್ಪಿದ್ದಾರೆ. ಮಾದ ನಾಯಕನಹಳ್ಳಿ ಕಣಪೋಳಿಸಲು ಸ್ಥಳಕ್ಕೆ ಭೇಟಿ ನೀಡಿ ಬಸವ ಜಯಂತಿ ಕಳುಹಿಸಲಾಗಿದ್ದು ಬಿಎಂಟಿಸಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.








