ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತ ಬಾಲಕಿಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ಯುವತಿಯನ್ನು ಜೋಯಾ ಎಂದು ತಿಳಿದುಬಂದಿದೆ.
ಭೀಕರವಾಗಿ ಹತ್ಯೆಗೈದ ಬಳಿಕ ಆರೋಪಿ ಶಬೀಲ್ ಪರಾರಿಯಾಗಿದ್ದಾನೆ. ಜಯ ಜೊತೆಗೆ ಸುಬಿಲ್ ನಿಶ್ಚಿತಾರ್ಥ ಮಾಡಿಕೊಂಡಿದ್ದ ತನ್ನ ಕುಟುಂಬಕ್ಕೆ ಸೇರಿದ ಪಾಳು ಬಿದ್ದ ಮನೆಗೆ ಕರೆದೋಯ್ದು ಕೊಲೆ ಮಾಡಿದ್ದಾನೆ. ಬೆಳಿಗ್ಗೆ 6:30ರ ಸುಮಾರಿಗೆ ಈ ಒಂದು ಕೊಲೆ ನಡೆದಿದ್ದು, ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಕೊಲೆ ನಡೆದಿದ್ದು ಸದ್ಯ ಆರೋಪಿ ಪತ್ತೆಗಾಗಿ ಡಿಜೆ ಹಳ್ಳಿ ಠಾಣೆ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ.








