ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಬಾಗಲೂರಿನ ಹೊಸೂರು ಬಂಡೆ ಬಳಿ ಅಗ್ನಿ ಅವಘಡ ಸಂಭವಿಸಿದೆ. ಶ್ರೀ ಕೃಷ್ಣ ಗೋಶಾಲೆಯಲ್ಲಿ ಈ ಒಂದು ಬೆಂಕಿ ಅವಘಡ ಸಂಭವಿಸಿದೆ.
ಮೇವು ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಸುಗಳಿಗೆ ಮೇವು ಸಂಗ್ರಹಿಸಿದ ಗೋದಾಮಿನಲ್ಲಿ ಈ ಒಂದು ಅಗ್ನಿ ದುರಂತ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಬ್ಬಂದಿಗಳು ಬಿಡಿ ಸೇದಿ ಎಸೆದಿದ್ದ ತುಂಡಿನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.








