ಮೈಸೂರು : ಜೆಡಿಎಸ್ ವರಿಷ್ಠ HD ದೇವೇಗೌಡ ಹಾಗು ಕುಮಾರಸ್ವಾಮಿ ವಿರುದ್ಧ ಅಸಮಾಧಾನಗೊಂಡಿರುವ ಶಾಸಕ ಜಿ.ಟಿ.ದೇವೇಗೌಡರು, ಮುಂದಿನ ಚುನಾವಣೆಯಲ್ಲಿ ಒಂದು ವೇಳೆ ಟಿಕೆಟ್ ಸಿಗದಿದ್ದರೆ, ಮತದಾರರ ತೀರ್ಮಾನಕ್ಕೆ ಬದ್ಧ ಎಂದಿರುವ ಅವರ ಹೇಳಿಕೆ ಕುತೂಹಲ ಮೂಡಿಸಿದೆ.
ಹೌದು ಮೈಸೂರಲ್ಲಿ ಮಾತನಾಡಿದ ಜಿ.ಟಿ.ದೇವೇಗೌಡರು, ನಾನು ಜೆಡಿಎಸ್ ಪಕ್ಷದಲ್ಲೇ ಇದ್ದೇನೆ ಇರುತ್ತೇನೆ. ಟಿಕೆಟ್ ಕೊಡದಿದ್ರೆ ಮತದಾರರು ನೀವು ಏನ್ ಹೇಳ್ತಿರಾ ಅದಕ್ಕೆ ನಾನು ಬದ್ಧವಾಗಿರುತ್ತೇನೆ. ಅರ್ಜಿ ಹಾಕು ಅಂದ್ರೆ ಹಾಕುತ್ತೇನೆ. ನಿಮ್ಮ ಪ್ರೀತಿ ಆಶೀರ್ವಾದವೇ ನನಗೆ ಧೈವ. ನನ್ನ ಬಳಿ ಏನು ಸಹಾಯ ಮಾಡಿಸಿಕೊಳ್ಳದ ಜನರು ನನ್ನನ್ನು ಗೆಲ್ಲಿಸಿದ್ದಾರೆ. ನಾನು ಬೆಳೆಸಿದವರು, ದುಡ್ಡು ಮಾಡಿದವರು ನನ್ನ ವಿರುದ್ಧವೇ ನಿಂತಿದ್ದಾರೆ ಎಂದು ಗುಡುಗಿದರು.
ಈ ಹಿಂದೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಜಿ.ಟಿ.ದೇವೇಗೌಡರ ಬದಲಾಗಿ ಅವರ ಪುತ್ರ ಹರೀಶ್ ಗೌಡ ಅವರಿಗೆ ಟಿಕೆಟ್ ನೀಡುವ ಕುರಿತು ಚಿಂತನೆಗಳು ನಡೆದಿವೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಎಲ್ಲಾ ಬೆಳವಣಿಗೆ ನಡುವೆ ಶಾಸಕ ಜಿ.ಟಿ.ದೇವೇಗೌಡರು ಹೊಸ ರಾಜಕೀಯ ದಾಳವನ್ನು ಉರುಳಿಸಿದ್ದಾರೆ.








