Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ ಶೀಘ್ರವೇ ಚುನಾವಣೆ ಬರಲಿದೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ!

ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ: ಸಿಎಂ ಸಿದ್ದರಾಮಯ್ಯ ರಾಜೀನಾಮೆ? ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಸಾರ್ವಜನಿಕರೇ ಗಮನಿಸಿ : ಬಸ್ ಪ್ರಯಾಣಕ್ಕೂ ಮುನ್ನ ಈ 7 ಕೆಲಸ ಮಿಸ್ ಮಾಡಬೇಡಿ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » IPL ವಿಜೇತರ ಕಂಪ್ಲೀಟ್ ಲಿಸ್ಟ್ ಇಲ್ಲಿದೆ : ಯಾರಿಗೆ ಎಷ್ಟು ಟ್ರೋಫಿ? MI-CSK ನಡುವೆ ನಂಬರ್-1 ಪೈಪೋಟಿ !
KARNATAKA

IPL ವಿಜೇತರ ಕಂಪ್ಲೀಟ್ ಲಿಸ್ಟ್ ಇಲ್ಲಿದೆ : ಯಾರಿಗೆ ಎಷ್ಟು ಟ್ರೋಫಿ? MI-CSK ನಡುವೆ ನಂಬರ್-1 ಪೈಪೋಟಿ !

By kannadanewsnow57

ಬೆಂಗಳೂರು: ಕ್ರಿಕೆಟ್ ಪ್ರೇಮಿಗಳ ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನೂತನ ಸೀಸನ್ ಮಾರ್ಚ್ 28 ರಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.

ಕಳೆದ ಸೀಸನ್‌ನಲ್ಲಿ ಚೊಚ್ಚಲ ಬಾರಿಗೆ ಟ್ರೋಫಿ ಗೆದ್ದಿದ್ದ ಆರ್‌ಸಿಬಿ, ಈ ಬಾರಿ ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಗುರಿಯೊಂದಿಗೆ ಕಣಕ್ಕಿಳಿಯುತ್ತಿದೆ. ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಈಗ ಡಿಫೆಂಡಿಂಗ್ ಚಾಂಪಿಯನ್ ಆಗಿ ತಂಡವನ್ನು ಮುನ್ನಡೆಸಲಿದ್ದಾರೆ.

ಅತಿ ಹೆಚ್ಚು ಪ್ರಶಸ್ತಿ ಗೆದ್ದವರು ಯಾರು?
2008 ರಲ್ಲಿ ರಾಜಸ್ಥಾನ್ ರಾಯಲ್ಸ್‌ನಿಂದ ಆರಂಭವಾದ ಈ ಐಪಿಎಲ್ ಪಯಣದಲ್ಲಿ, ಹಲವು ತಂಡಗಳು ಚಾಂಪಿಯನ್ ಆಗಿ ಹೊರಹೊಮ್ಮಿವೆ. ಐಪಿಎಲ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಅತ್ಯಂತ ಯಶಸ್ವಿ ತಂಡಗಳಾಗಿವೆ. ಇವೆರಡೂ ತಂಡಗಳು ತಲಾ 5 ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿವೆ.

MS ಧೋನಿ ಮತ್ತು ರೋಹಿತ್ ಶರ್ಮಾ: ಧೋನಿ ನೇತೃತ್ವದಲ್ಲಿ CSK 2010, 2011, 2018, 2021 ಮತ್ತು 2023 ರಲ್ಲಿ ಪ್ರಶಸ್ತಿ ಗೆದ್ದಿದೆ. ಅಷ್ಟೇ ಅಲ್ಲದೆ, ಅತಿ ಹೆಚ್ಚು ಅಂದರೆ 5 ಬಾರಿ ರನ್ನರ್-ಅಪ್ ಕೂಡ ಆಗಿದೆ. ಮುಂಬೈ ಇಂಡಿಯನ್ಸ್ ತಂಡವು ರೋಹಿತ್ ಶರ್ಮಾ ನಾಯಕತ್ವದಲ್ಲಿ 2013, 2015, 2017, 2019 ಮತ್ತು 2020 ರಲ್ಲಿ ಚಾಂಪಿಯನ್ ಆಗಿತ್ತು.

ಯಶಸ್ವಿ ತಂಡಗಳ ಸಾಲಿನಲ್ಲಿ ಕೆಕೆಆರ್
ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮೂರು ಬಾರಿ ಪ್ರಶಸ್ತಿ ಗೆಲ್ಲುವ ಮೂಲಕ ಮೂರನೇ ಯಶಸ್ವಿ ತಂಡ ಎನಿಸಿಕೊಂಡಿದೆ. ಗೌತಮ್ ಗಂಭೀರ್ ನಾಯಕತ್ವದಲ್ಲಿ 2 (2012, 2014) ಮತ್ತು ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ 1 (2024) ಪ್ರಶಸ್ತಿಯನ್ನು ಕೆಕೆಆರ್ ಗೆದ್ದಿದೆ.

IPL ವಿಜೇತರು ಮತ್ತು ರನ್ನರ್-ಅಪ್ ತಂಡಗಳ ಪಟ್ಟಿ (2008-2025)

ವರ್ಷ ವಿಜೇತರು ರನ್ನರ್-ಅಪ್
2025 ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂಜಾಬ್ ಕಿಂಗ್ಸ್
2024 ಕೋಲ್ಕತ್ತಾ ನೈಟ್ ರೈಡರ್ಸ್ ಸನ್ ರೈಸರ್ಸ್ ಹೈದರಾಬಾದ್
2023 ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟಾನ್ಸ್
2022 ಗುಜರಾತ್ ಟೈಟಾನ್ಸ್ ರಾಜಸ್ಥಾನ್ ರಾಯಲ್ಸ್
2021 ಚೆನ್ನೈ ಸೂಪರ್ ಕಿಂಗ್ಸ್ ಕೋಲ್ಕತ್ತಾ ನೈಟ್ ರೈಡರ್ಸ್
2020 ಮುಂಬೈ ಇಂಡಿಯನ್ಸ್ ಡೆಲ್ಲಿ ಕ್ಯಾಪಿಟಲ್ಸ್
2019 ಮುಂಬೈ ಇಂಡಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್
2018 ಚೆನ್ನೈ ಸೂಪರ್ ಕಿಂಗ್ಸ್ ಸನ್ ರೈಸರ್ಸ್ ಹೈದರಾಬಾದ್
2017 ಮುಂಬೈ ಇಂಡಿಯನ್ಸ್ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್
2016 ಸನ್ ರೈಸರ್ಸ್ ಹೈದರಾಬಾದ್ ರಾಯಲ್ ಚಾಲೆಂಜರ್ಸ್ ಬೆಂಗಳೂರು
2015 ಮುಂಬೈ ಇಂಡಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್
2014 ಕೋಲ್ಕತ್ತಾ ನೈಟ್ ರೈಡರ್ಸ್ ಪಂಜಾಬ್ ಕಿಂಗ್ಸ್
2013 ಮುಂಬೈ ಇಂಡಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್
2012 ಕೋಲ್ಕತ್ತಾ ನೈಟ್ ರೈಡರ್ಸ್ ಚೆನ್ನೈ ಸೂಪರ್ ಕಿಂಗ್ಸ್
2011 ಚೆನ್ನೈ ಸೂಪರ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು
2010 ಚೆನ್ನೈ ಸೂಪರ್ ಕಿಂಗ್ಸ್ ಮುಂಬೈ ಇಂಡಿಯನ್ಸ್
2009 ಡೆಕ್ಕನ್ ಚಾರ್ಜರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು
2008 ರಾಜಸ್ಥಾನ್ ರಾಯಲ್ಸ್ ಚೆನ್ನೈ ಸೂಪರ್ ಕಿಂಗ್ಸ್
Here is the complete list of IPL winners: Who has how many trophies? No. 1 rivalry between MI-CSK!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಶೀಘ್ರವೇ ಚುನಾವಣೆ ಬರಲಿದೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ!

2 Mins Read

ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ: ಸಿಎಂ ಸಿದ್ದರಾಮಯ್ಯ ರಾಜೀನಾಮೆ? ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

1 Min Read

ಸಾರ್ವಜನಿಕರೇ ಗಮನಿಸಿ : ಬಸ್ ಪ್ರಯಾಣಕ್ಕೂ ಮುನ್ನ ಈ 7 ಕೆಲಸ ಮಿಸ್ ಮಾಡಬೇಡಿ.!

2 Mins Read
Recent News

BIG NEWS : ರಾಜ್ಯದಲ್ಲಿ ಶೀಘ್ರವೇ ಚುನಾವಣೆ ಬರಲಿದೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ!

ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ: ಸಿಎಂ ಸಿದ್ದರಾಮಯ್ಯ ರಾಜೀನಾಮೆ? ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಸಾರ್ವಜನಿಕರೇ ಗಮನಿಸಿ : ಬಸ್ ಪ್ರಯಾಣಕ್ಕೂ ಮುನ್ನ ಈ 7 ಕೆಲಸ ಮಿಸ್ ಮಾಡಬೇಡಿ.!

BREAKING : ನಾಳೆ ಬೆಳಿಗ್ಗೆ ರಾಜ್ಯಪಾಲರ ಭೇಟಿ ಬಳಿಕ, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | CM Siddaramaiah

State News
KARNATAKA

BIG NEWS : ರಾಜ್ಯದಲ್ಲಿ ಶೀಘ್ರವೇ ಚುನಾವಣೆ ಬರಲಿದೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ!

By ಸುರೇಶ್‌ KARNATAKA 2 Mins Read

ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಇದೀಗ ಅಂತಿಮ ಘಟ್ಟಕ್ಕೆ ತಲುಪಿದೆ ಎಂಬ ಚರ್ಚೆಗಳು…

ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ: ಸಿಎಂ ಸಿದ್ದರಾಮಯ್ಯ ರಾಜೀನಾಮೆ? ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಸಾರ್ವಜನಿಕರೇ ಗಮನಿಸಿ : ಬಸ್ ಪ್ರಯಾಣಕ್ಕೂ ಮುನ್ನ ಈ 7 ಕೆಲಸ ಮಿಸ್ ಮಾಡಬೇಡಿ.!

BREAKING : ನಾಳೆ ಬೆಳಿಗ್ಗೆ ರಾಜ್ಯಪಾಲರ ಭೇಟಿ ಬಳಿಕ, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | CM Siddaramaiah

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.