ಕಲಬುರ್ಗಿ : ಬಾಲಕಿಯ ಜೊತೆಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಲ್ಲಿಕಾರ್ಜುನ ಮುತ್ಯ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ತಡೆ ನೀಡಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ಹೊರಡಿಸಿದೆ.
ಹೌದು ತನಿಖೆಗೆ ಕಲಬುರ್ಗಿ ಹೈಕೋರ್ಟ್ ವಿಭಾಗೀಯ ಪೀಠ ಇದೀಗ ತಡೆ ನೀಡಿದೆ. ವಿಚಾರಣೆಗೆ ತಡೆ ನೀಡುವಂತೆ ಮಲ್ಲಿಕಾರ್ಜುನ ಮುತ್ಯಾ ಅರ್ಜಿ ಸಲ್ಲಿಕೆ ಮಾಡಿದರು. ಅರ್ಜಿ ವಿಚಾರಣೆ ನಡೆಸಿ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಫೆಬ್ರವರಿ 25 ರಂದು ಗೋಗಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣದ ಕುರಿತು ಶಹಾಪುರ ಸಿಪಿಐ ಶರಣಗೌಡ ನ್ಯಾಮಣ್ಣನವರ್ ತನಿಖೆ ನಡೆಸುತ್ತಿದ್ದಾರೆ.








