ಕೊಡಗು : ಇಂದು ರಾಜ್ಯಾದ್ಯಂತ ಹತ್ತನೇ ತರಗತಿ ಪರೀಕ್ಷೆ ಆರಂಭವಾಗಿದ್ದು, ಕೊಡಗು ಜಿಲ್ಲೆಯಲ್ಲಿ ಇಬ್ಬರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ನಿರಾಕರಣೆ ಮಾಡಲಾಗಿದೆ. ಈ ಹಿನ್ನೆಲೆ ಪರೀಕ್ಷಾ ಕೇಂದ್ರದ ಆಭರಣದಲ್ಲಿ ಪೋಷಕರು ಹಾಗೂ ಇಬ್ಬರು ವಿದ್ಯಾರ್ಥಿಗಳು ಕಣ್ಣೀರು ಹಾಕಿರುವ ಘಟನೆ ನಡೆದಿದೆ.
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾಮದ ಉದಯ ಪ್ರೌಢಶಾಲೆ ಆವರಣದಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳು ಕಣ್ಣೀರು ಹಾಕಿರುವ ಘಟನೆ ವರದಿಯಾಗಿದೆ. ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದಾರೆ. ಬೆಟ್ಟಗೇರಿ ಪರೀಕ್ಷಾ ಕೇಂದ್ರಕ್ಕೆ ಬಿ ಇ ಓ ಮಹೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಾಲಾ ಆಡಳಿತ ಮಂಡಳಿ ಎಡವಟ್ಟಿನಿಂದ ಸಮಸ್ಯೆ ಉಂಟಾಗಿದೆ. ಉದಯ ಪ್ರೌಢಶಾಲೆ ಅನಧಿಕೃತವಾಗಿದೆ. ಏಪ್ರಿಲ್ ನಲ್ಲಿ ನಡೆಯುವ ಪರೀಕ್ಷೆಯಲ್ಲಿ ಅವಕಾಶ ಮಾಡಿಕೊಡುತ್ತೇವೆ. ಬಿಇಒ ಬಂದರು ಶಾಲಾ ಆಡಳಿತ ಮಂಡಳಿ ಸದಸ್ಯರು ಸ್ಥಳಕ್ಕೆ ಬಂದಿಲ್ಲ. ಹಾಗಾಗಿ ಬೇರೆ ದಾರಿ ಕಾಣದೆ ವಿದ್ಯಾರ್ಥಿಗಳು ಮತ್ತು ಪೋಷಕರು ಅಸಹಾಯಕರಾಗಿದ್ದಾರೆ.








