ಹಾಸನ : ಮಾಜಿ ಪ್ರಧಾನಿ ಹಾಗು ಜೆಡಿಎಸ್ ವರಿಷ್ಟರು ಆಗಿರುವ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ (88) ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.
ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಂಗಿ ನಿಧನಕ್ಕೆ ದೇವೇಗೌಡರು ಕಂಬನಿ ಮಿಡಿದಿದ್ದಾರೆ.ಇಂದು ಸಂಜೆ ಹೊಳೆನರಸೀಪುರದ ಬಸವನಾಯಕನಹಳ್ಳಿ ಅವರ ಅಂತ್ಯಕ್ರಿಯೆ ನೆರವೇರಲಿದೆ.








