ದಾವಣಗೆರೆ : ಏಪ್ರಿಲ್ 9 ರಂದು ಕರ್ನಾಟಕದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆಗೆ ಮತದಾನ ನಡೆಯಲಿದೆ. ಈಗಾಗಲೇ ಬಿಜೆಪಿ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಕಾಂಗ್ರೆಸ್ ಇನ್ನೂ ಟಿಕೆಟ್ ಹಂಚಿಕೆ ಗೊಂದಲದಲ್ಲಿದೆ
ಆದರೆ ಉಪ ಚುನಾವಣೆ ಘೋಷಣೆಯಾದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ರಂಗೇರಿದೆ. ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದೆ. ಹೌದು ದಾವಣಗೆರೆ ದಕ್ಷಿಣ ವಿಧಾನಸಭೆ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಿಸಿದ ಬೆನ್ನಲ್ಲೇ ಮಾಜಿ ಸಚಿವ ರೇಣುಕಾಚಾರ್ಯ ಅಪಸ್ವರ ಹೊರಡಿಸಿದ್ದಾರೆ.
ವರಿಷ್ಠರು ಎಲ್ಲರನ್ನೂ ಕೂಡಿಸಿ ಚರ್ಚಿಸಿ ಟಿಕೆಟ್ ಘೋಷಿಸಬೇಕಿತ್ತು.ಏಕಾಏಕಿ ಟಿಕೆಟ್ ಘೋಷಿಸಿದ್ದು ಸರಿಯಲ್ಲ ಎಂದಿದ್ದಾರೆ. ಆದರೆ, ನಿನ್ನೆ ಬೆಂಗಳೂರಲ್ಲಿ ರೇಣುಕಾಚಾರ್ಯ ಅವರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ. ಪಕ್ಷದ ಗೆಲುವಿಗೆ ಒಟ್ಟಾಗಿ ಶ್ರಮಿಸುವ ಹೇಳಿಕೆ ನೀಡಿದ್ದರು. ಬಿಜೆಪಿ ಪರಿಶಿಷ್ಟ ಪಂಗಡದ ಮುಖಂಡ ಶ್ರೀನಿವಾಸ್ ದಾಸಕರಿಯಪ್ಪ ಅವರಿಗೆ ಟಿಕೆಟ್ ಘೋಷಿಸಿದೆ.








