ರಾಯಚೂರು : ಭಾರಿ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ವೃದ್ದೆ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ವಾರ್ಡ್ ನಂಬರ್ 14ರಲ್ಲಿ ನಡೆದಿದೆ.
ಮೃತ ವೃದ್ಧೆಯನ್ನು ಈಶಮ್ಮ (60) ಎಂದು ತಿಳಿದುಬಂದಿದೆ. ಮನೆ ಮೇಲ್ಚಾವಣಿ ಕುಸಿದು ಬಿದ್ದು ವೃದ್ದೆ ಈಶಮ್ಮ ಗಾಯಗೊಂಡಿದ್ದರು. ತಕ್ಷಣ ಅವರನ್ನು ರಾಯಚೂರು ಜಿಲ್ಲೆಯ ಮಸ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಮಸ್ಕಿ ಆಸ್ಪತ್ರೆಯಲ್ಲಿ ಈಶಮ್ಮ ಸಾವನ್ನಪ್ಪಿದ್ದಾರೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ.








