ದಾವಣಗೆರೆ : ಕರ್ನಾಟಕದಲ್ಲಿ ಏಪ್ರಿಲ್ 9 ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆಗೆ ಮತದಾನ ನಡೆಯಲಿದ್ದು ಈಗಾಗಲೇ ಬಿಜೆಪಿ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.
ಆದರೆ ಕಾಂಗ್ರೆಸ್ ಮಾತ್ರ ಇನ್ನು ಅಭ್ಯರ್ಥಿಗಳ ಹೆಸರು ಘೋಷಣೆಯಲ್ಲಿ ಗೊಂದಲದಲ್ಲಿ ಇದೆ ಆದರೆ ಟಿಕೆಟ್ ಘೋಷಣೆ ಮೊದಲೇ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಇಂದು ಸಚಿವ ಮಲ್ಲಿಕಾರ್ಜುನ ಪುತ್ರ ಸಮರ್ಥ್ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಮುನ್ನ ನಿಟ್ಟುವಳ್ಳಿ ದುರ್ಗಾಂಬಿಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದರು.
ಕಾಂಗ್ರೆಸ್ ನಲ್ಲಿ ಟಿಕೆಟ್ ಫೈನಲ್ ಆಗಿಲ್ಲ ಆದರೂ ತಾಯಿ ಡಾ. ಪ್ರಭಾ ಮಲ್ಲಿಕಾರ್ಜುನ್ ಜೊತೆಗೆ ಸಮರ್ಥ ನಾಮಪತ್ರ ಸಲ್ಲಿಸಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿ ಸಮರ್ಥ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಕೆಪಿಸಿಸಿ ವಕ್ತಾರ ಡಿ ಬಸವರಾಜ್, ಸಲೀಂ ಅಹಮದ್ ಹಾಗೂ ಗೋಣೆಪ್ಪ ಸಾಥ್ ಕೊಟ್ಟಿದ್ದರು. ಟಿಕೆಟ್ ಘೋಷಣೆ ಆಗದೆ ನಾಮಪತ್ರ ಸಲ್ಲಿಸಿರುವುದು ಬಹಳ ಕುತೂಹಲಕ್ಕೆ ಕಾರಣವಾಗಿದೆ.
ಕಾರ್ಯಕರ್ತರಿಗೆ ಟಿಕೆಟ್ ಕೊಡಿ
ಇನ್ನು ಕಳೆದ ಮಂಗಳವಾರ ಸಭೆ ನಡೆಯಿತು. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಅಭಿಪ್ರಾಯ ಸಂಗ್ರಹ ಸಭೆ ನಡೆಯಿತಿ. ಈ ವೇಳೆ ಮಾತನಾಡಿದ ಜಿಲ್ಲಾಉಸ್ತುವಾರಿ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ಮಾತನಾಡಿ, ”ಅವರಿವರು ಅಂತಿಲ್ಲ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಿ. ಎಲ್ಲರೂ ಸೇರಿ ಗೆಲ್ಲಿಸಿಕೊಂಡು ಬರುತ್ತೇವೆ ” ಎಂದರು.
ಚುನಾವಣೆ ಹೊತ್ತಿನಲ್ಲಿ ಬರುವವರ ಬಗ್ಗೆ ಗಮನ ಹರಿಸಬೇಕು, ಪಕ್ಷ ಕಟ್ಟಿದ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು. ಚುನಾವಣೆ ಹೊತ್ತಿನಲ್ಲಿ ಬರುವವರು ಎಂದಾದರೂ ಕಾರ್ಯಕರ್ತರ ಜತೆ ಕೆಲಸ ಮಾಡಿದ್ದಾರಾ? ಒಂದು ಟೀ ಕೊಡಿಸಿದ್ದಾರಾ” ಎಂದು ಪ್ರಶ್ನಿಸಿದರು.








