ಕೊಪ್ಪಳ: ದೇಶಾದ್ಯಂತ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್ಗಳ ಅಭಾವಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಅತಿಯಾದ ಆತ್ಮೀಯತೆಯೇ ಕಾರಣ ಎಂದು ರಾಜ್ಯ ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಟೀಕಿಸಿದ್ದಾರೆ.
ಶುಕ್ರವಾರ ತಾಲೂಕಿನ ಮುನಿರಾಬಾದ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ವೈಫಲ್ಯವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಸಿಲಿಂಡರ್ ಕೊರತೆ ಎದುರಾಗಿದ್ದು, ಈ ಸಂಬಂಧ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಗಮನ ಸೆಳೆದಿದ್ದಾರೆ ಎಂದು ಮಾಹಿತಿ ನೀಡಿದರು.
“ನಾವು ಮೋದಿಯವರ ವಿರುದ್ಧ ಮಾತನಾಡಿದರೆ ಟೀಕೆ ಮಾಡುತ್ತಾರೆ ಎನ್ನುತ್ತಾರೆ. ಆದರೆ ವಾಸ್ತವವಾಗಿ, ಮೋದಿ ಅವರು ಟ್ರಂಪ್ ಅವರೊಂದಿಗೆ ಅತಿಯಾದ ಸ್ನೇಹ ಬೆಳೆಸಿದ್ದರಿಂದ ಅಮೆರಿಕದ ಪ್ರಭಾವ ಭಾರತದ ಮೇಲೆ ಹೆಚ್ಚಾಗುತ್ತಿದೆ. ಈ ಸ್ನೇಹದ ಪರಿಣಾಮವಾಗಿಯೇ ಇಂದು ದೇಶಕ್ಕೆ ಇಂತಹ ಆರ್ಥಿಕ ಮತ್ತು ಸಂಪನ್ಮೂಲಗಳ ಸಂಕಷ್ಟ ಎದುರಾಗಿದೆ,” ಎಂದು ಅವರು ದೂರಿದರು.
ಹಳೆಯ ವಿದೇಶಾಂಗ ನೀತಿಯನ್ನು ಸ್ಮರಿಸಿದ ಸಚಿವರು, “ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಅಮೆರಿಕ, ರಷ್ಯಾ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳೊಂದಿಗೆ ಸಮತೋಲನದ ಸಂಬಂಧವಿತ್ತು. ಚೀನಾ ಮತ್ತು ಪಾಕಿಸ್ತಾನವನ್ನು ಹೊರತುಪಡಿಸಿ ಉಳಿದೆಲ್ಲಾ ದೇಶಗಳ ಸಹಕಾರ ಉತ್ತಮವಾಗಿತ್ತು. ಆದರೆ ಪ್ರಸ್ತುತ ವಿದೇಶಾಂಗ ನೀತಿಯಿಂದಾಗಿ ದೇಶದ ಸ್ಥಿತಿ ಹದಗೆಟ್ಟಿದೆ. ಮೋದಿಯವರು ಟ್ರಂಪ್ ಅವರನ್ನು ಬೆಂಬಲಿಸುವ ನಿಟ್ಟಿನಲ್ಲಿ ಅವರ ಚುನಾವಣಾ ಪ್ರಚಾರದಂತಹ ಪ್ರಕ್ರಿಯೆಗಳಲ್ಲಿಯೂ ಭಾಗಿಯಾಗಿದ್ದರು. ಅಂದಿನಂತೆ ಸಮತೋಲನದ ನೀತಿ ಮುಂದುವರಿದಿದ್ದರೆ ಇಂದು ಸಿಲಿಂಡರ್ ಅಭಾವದಂತಹ ಪರಿಸ್ಥಿತಿ ಬರುತ್ತಿರಲಿಲ್ಲ,” ಎಂದು ಬೋಸರಾಜು ಆಕ್ರೋಶ ವ್ಯಕ್ತಪಡಿಸಿದರು.
ದಾವಣಗೆರೆ ಉಪ ಚುನಾವಣೆಗೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ಟಿಕೆಟ್ ಘೋಷಣೆ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ
BREAKING : ಉಪಚುನಾವಣೆ ಕಾವು : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ತಾಯಿಯೊಂದಿಗೆ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ








