ಬೆಂಗಳೂರು : ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದುಬಾರಿ ವಿರೋಧಿಸಿ ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಒತ್ತಾಯಿಸಿ ಇಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬೆಂಗಳೂರಿನ ಅತ್ತಿಬೆಲೆಯಲ್ಲಿ ಕೇಂದ್ರ ರಾಜ್ಯ ಸರ್ಕಾರವನ್ನು ಎಚ್ಚರಿಸುವ ಸಲುವಾಗಿ ಹೆದ್ದಾರಿ ತಡೆ ಮಾಡಿದ್ದು ಅತ್ತಿಬೆಲೆ ಗಡಿಯಲ್ಲಿ ಹೊಸೂರು ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದರು. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪ್ರತಿಭಟನೆ ನಡೆಸಿದರು.
ಇರಾನ್ ಇಸ್ರೇಲ್ ಅಮೆರಿಕ ಯುದ್ಧದಿಂದ ಸಿಲಿಂಡರ್ ಕೊರತೆ ಉಂಟಾಗಿದೆ. ವಾಣಿಜ್ಯ ಸಿಲಿಂಡರ್ ದುಬಾರಿಯಾಗಿದೆ. ಪೆಟ್ರೋಲ್ ಡೀಸೆಲ್ ಅಭಾವ ಉಂಟಾಗಿದೆ. ಇದರಿಂದ ಜನರ ಮೇಲೆ ಪರಿಣಾಮ ಬೀರುತ್ತಿದೆ. ಇದನ್ನು ನಿಭಾಯಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿದೆ. ಹೀಗೆ ಮುಂದುವರೆದರೆ ಕರ್ನಾಟಕ ಬಂಧಗೆ ಕರೆ ನೀಡುವ ಎಚ್ಚರಿಕೆ ನೀಡಿದರು. ಈ ವೇಳೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನ ವಶಕ್ಕೆ ಪಡೆದರು.








