ಬೆಂಗಳೂರು : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಹಿನ್ನೆಲೆ, ಈಗಾಗಲೇ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಜಟಾಪಟಿ ನಡೆಯುತ್ತಿದ್ದು, ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಉಸ್ತುವಾರಿ ಇಂದು ಸಂಜೆ ಅಥವಾ ನಾಳೆ ಟಿಕೆಟ್ ಘೋಷಣೆ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಶನಿವಾರ ಸಂಜೆ ಅಥವಾ ಭಾನುವಾರ ಬೆಳಗ್ಗೆಯೊಳಗೆ ಟಿಕೆಟ್ ಘೋಷಣೆ ಆಗಲಿದೆ. ಈ ಕುರಿತಾಗಿ ಪ್ರಮುಖರ ಸಭೆಯಲ್ಲಿ ವ್ಯಾಪಕವಾಗಿ ಚರ್ಚೆ ಮಾಡಲಾಗಿದೆ. ಯಾವುದೇ ಒಬ್ಬ ಕಾರ್ಯಕರ್ತರ ಅಪಸ್ವರ ಇದ್ರೂ ಕೂಡ ಪರಿಗಣನೆಗೆ ತೆಗೆದುಕೊಂಡಿದ್ದೇವೆ ಎರಡು ಕ್ಷೇತ್ರಗಳ ಬಗ್ಗೆ ಶುಕ್ರವಾರ ತಡ ತಡರಾತ್ರಿಯವರೆಗೆ ಟಿಕೆಟ್ ವಿಚಾರವಾಗಿ ಚರ್ಚೆ ಮಾಡಿದ್ದೇವೆ. ಬಹುತೇಕ ಟಿಕೆಟ್ ಘೋಷಣೆ ಸಂಜೆ ಅಥವಾ ಭಾನುವಾರ ಬೆಳಗ್ಗೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈಗಾಗಲೇ ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಆದರೆ ಇನ್ನೂ ಭಿಫಾರಂ ನೀಡಲಾಗಿಲ್ಲ. ಪಕ್ಷದಿಂದ ಟಿಕೆಟ್ ಘೋಷಣೆಗೂ ಮುನ್ನವೇ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಮರ್ಥ್ ಜೊತೆಗೆ ಇನ್ನೂ ಕೆಲವು ಕಾಂಗ್ರೆಸ್ ನ ಮುಸ್ಲಿಂ ಮುಖಂಡರು ಸಹ ನಾಮಪತ್ರ ಸಲ್ಲಿಕೆ ಮಾಡಿದ್ದು ಕಾಂಗ್ರೆಸ್ ಹೈಕಮಾಂಡ್ ಗೆ ಇದೀಗ ದಕ್ಷಿಣ ಕ್ಷೇತ್ರದ ಟಿಕೆಟ್ ತಲೆನೋವು ಆಗಿ ಪರಿಣಮಿಸಿದೆ.








