ಬೆಂಗಳೂರು : ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನಪ್ಪಿದ್ದಾರೆ. ಹೈವೇ ಯಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಟಿಟಿ ವಾಹನದಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ನಡೆದಿದೆ.
ಮಧ್ಯರಾತ್ರಿ ಒಂದು ಭೀಕರ ಅಪಘಾತ ಸಂಭವಿಸಿದ್ದು ಹೈವೇಯಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಟಿಟಿ ವಾಹನದಲ್ಲಿ ಇದ್ದಂತಹವರು ಮಹಿಳೆಯರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಜಯಮ್ಮ (60) ಯಶೋದಮ್ಮ (60) ಹಾಗೂ ಗಂಗಾ (38) ಎಂದು ತಿಳಿದು ಬಂದಿದೆ.ಘಟನೆಯಲ್ಲಿ ಟಿಟಿ ವಾಹನ ಚಾಲಕ ಸೇರಿದಂತೆ 8 ಜನರಿಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.








