ಬಾಗಲಕೋಟೆ : ಏಪ್ರಿಲ್ 9 ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಚುನಾವಣೆಗು ಮುನ್ನ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು ಡಾ. ದೇವರಾಜ್ ಪಾಟೀಲ್ ಜೆಡಿಎಸ್ ತೊರೆದು ಬಿಜೆಪಿ ಸೇರಲಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾತನಾಡಿದ ಅವರು ತನ್ನ ಬೆಂಬಲಿಗರ ಜೊತೆಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ. ಮೂಲ ಕಾಂಗ್ರೆಸ್ಸಿಗ ಆಗಿರುವ ಮಕ್ಕಳ ದೇವರಾಜ್ ಪಾಟೀಲ್ ಹಲವು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದೆ. 2013 ರಲ್ಲಿ ಟಿಕೆಟ್ ನೀಡುವುದಾಗಿ ಹೇಳಿ ಅನ್ಯಾಯ ಮಾಡಿದರು. 2018ರಲ್ಲೂ ಟಿಕೆಟ್ ಘೋಷಣೆ ಮಾಡಿದ್ದರು ಸಿದ್ದರಾಮಯ್ಯ ಸ್ಪರ್ಧಿಸಿದ್ದರಿಂದ ಕ್ಷೇತ್ರವನ್ನು ಬಿಟ್ಟು ಕೊಡಬೇಕಾಯಿತು.
ಇನ್ನು 2023ರಲ್ಲಿ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡದೇ ಅನ್ಯಾಯ ಮಾಡಿದರು. ಕೊನೆಗೆ 2013ರ ಚುನಾವಣೆಯಲ್ಲಿ ಜೆಡಿಎಸ್ ಸೇರಿ ಸ್ಪರ್ಧೆ ಮಾಡಿದೆ. ಆದ್ದರಿಂದ ನನಗೆ ಗೌರವ ಸಿಗುವ ಪಕ್ಷ ಅಂತ ಬಿಜೆಪಿ ಸೇರುತ್ತಿದ್ದೇನೆ. ಬಾಗಲಕೋಟೆ ಬಿಜೆಪಿ ನಾಯಕರು ಸಮ್ಮುಖದಲ್ಲಿ ಪಕ್ಷ ಸೇರಲಿದ್ದೇನೆ ಎಂದು ಬಾಗಲಕೋಟೆಯಲ್ಲಿ ಡಾ. ದೇವರಾಜ್ ಪಾಟೀಲ್ ಹೇಳಿಕೆ ನೀಡಿದರು.








