ಸಾಗರ: ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಮದರ್ ತೆರೇಸಾ ಕೌಶಲ್ಯ ತರಬೇತಿ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಮೂರು ತಿಂಗಳ ಉಚಿತ ಬ್ಯುಟಿಶಿಯನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಹಾಗೂ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.
ಗಣ್ಯರ ಉಪಸ್ಥಿತಿ:
ಕಾರ್ಯಕ್ರಮದ ವೇದಿಕೆಯಲ್ಲಿ ಮದರ್ ತೆರೇಸಾ ಕೌಶಲ್ಯ ತರಬೇತಿ ಕೇಂದ್ರದ ಸ್ಥಾಪಕರು ಹಾಗೂ ಸಾಗರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಮರಿಯಾ ಲಿಮಾ ಅವರು ಉಪಸ್ಥಿತರಿದ್ದು, ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಸಾಗರ ಪೇಟೆ ಠಾಣೆಯ ಎ.ಎಸ್.ಐ. ಮೀರಾಬಾಯಿ, ಹಿರಿಯ ವಕೀಲರಾದ ಕೆ.ವಿ. ಪ್ರವೀಣ್ ಹಾಗೂ ಶಿಕ್ಷಕಿ ಶೀತಲ್ ಲೀಮಾ ಅವರು ಭಾಗವಹಿಸಿ, ಮಹಿಳೆಯರು ಕೌಶಲ್ಯಗಳನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಸ್ವಾವಲಂಬಿಗಳಾಗಿ ಬದುಕುವಂತೆ ಕರೆ ನೀಡಿದರು.
ಅನಿಸಿಕೆ ಹಂಚಿಕೆ:
ಮೂರು ತಿಂಗಳ ಸುದೀರ್ಘ ತರಬೇತಿಯಲ್ಲಿ ಪಾಲ್ಗೊಂಡಿದ್ದ ಶಿಬಿರಾರ್ಥಿಗಳಾದ ಲತಾ ಹಾಗೂ ರೇಣುಕಾ ಅವರು ತಮ್ಮ ಅನುಭವಗಳನ್ನು ಹಂಚಿಕೊಂಡರು. ತರಬೇತಿಯು ಅತ್ಯಂತ ಉಪಯುಕ್ತವಾಗಿದ್ದು, ಮುಂದಿನ ದಿನಗಳಲ್ಲಿ ಸ್ವಂತ ಉದ್ಯೋಗ ಆರಂಭಿಸಲು ಇದು ಆತ್ಮವಿಶ್ವಾಸ ನೀಡಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಸ್ಫೂರ್ತಿ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಪ್ರಿಯಾಂಕ ಅಚ್ಚುಕಟ್ಟಾಗಿ ನಿರೂಪಿಸಿದರು. ಪವಿತ್ರ ಎಸ್.ಡಿ ಅವರು ಅತಿಥಿಗಳನ್ನು ಸ್ವಾಗತಿಸಿ, ಕೊನೆಯಲ್ಲಿ ವಂದನಾರ್ಪಣೆ ಸಲ್ಲಿಸಿದರು. ತರಬೇತಿ ಪೂರೈಸಿದ ಹತ್ತಾರು ಮಹಿಳೆಯರು ಈ ಸಂದರ್ಭದಲ್ಲಿ ಪ್ರಮಾಣಪತ್ರಗಳನ್ನು ಪಡೆದುಕೊಂಡರು.
BREAKING: ಇಸ್ರೇಲ್ ಭೀಕರ ವೈಮಾನಿಕ ದಾಳಿ: ಲೆಬನಾನ್ ನಲ್ಲಿ ಹಿಜ್ಬುಲ್ಲಾದ ಕಮಾಂಡರ್ ಸೇರಿ ಮೂವರು ಉಗ್ರರ ಹತ್ಯೆ
ಅಮೆರಿಕಕ್ಕೆ ಬಿಗ್ ಶಾಕ್: ಇರಾನ್ ನಡೆಸಿದ ಪ್ರತಿದಾಳಿಗೆ US ನ 6,700 ಕೋಟಿ ರೂ. ಮೌಲ್ಯದ ಆಸ್ತಿ ಪಾಸ್ತಿ ನಾಶ!








