ಬೆಂಗಳೂರು : ಕಮರ್ಷಿಯಲ್ ಸಿಲಿಂಡರ್ ಗಳ ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಸಚಿವ ಕೆಎಚ್ ಮುನಿಯಪ್ಪ ಅವರು ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು ಸಿಲಿಂಡರ್ ವಿತರಣಾ ಸಂಸ್ಥೆಗಳ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದಾರೆ.
IOC, HP, GALL, ಭಾರತ್ ಪೆಟ್ರೋಲಿಯಂ ಅಧಿಕಾರಿಗಳು ಈ ಒಂದು ಸಭೆಯಲ್ಲಿ ಭಾಗಿಯಾಗಿದ್ದರು ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ಸಭೆ ನಡೆಸಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಹಾರ ಸಚಿವ ಕೇಶವ್ಯಪ್ಪ ಕಮರ್ಷಿಯಲ್ ಸಿಲಿಂಡರ್ ಗೆ ರಿಜಿಸ್ಟರ್ ಮಾಡಿಸಿಕೊಳ್ಳಬೇಕು.
ಗೇಲ್ ಕಂಪನಿಯಲ್ಲಿ ಒಂದು ವಾರದೊಳಗೆ ರಿಜಿಸ್ಟರ್ ಮಾಡಿಸಿಕೊಳ್ಳಬೇಕು ಕೇಂದ್ರ ನೀಡುತ್ತಿದ್ದ 9000 ಸಿಲಿಂಡರ್ ಸಂಖ್ಯೆ ಏರಿಕೆ ಮಾಡಿದ್ದು ರಾಜ್ಯಕ್ಕೆ 10,000 ಸಿಲಿಂಡರ್ ನೀಡಲಿದೆ. ವಿನಾಕಾರಣ ಗ್ಯಾಸ್ ಡಿಸ್ಟ್ರಿಬ್ಯೂಟರ್ ಗಳ ಮೇಲೆ ಯಾರು ಒತ್ತಡ ಇರಬಾರದು ಬಂದಿರುವ ಸಮಸ್ಯೆಯನ್ನು ಎಲ್ಲರೂ ಜೊತೆಗೂಡಿ ಸಹಕರಿಸಿದರೆ ಬಗೆಹರಿಯುತ್ತದೆ ಎಂದು ಸಚಿವ ಕೆಎಚ್ ಮುನಿಯಪ್ಪ ಮನವಿ ಮಾಡಿದರು.
ಸಿಎಂ ಸಿದ್ದರಾಮಯ್ಯ ಸಿಲಿಂಡರ ಭಾವದ ಕುರಿತು ಕೇಂದ್ರಕ್ಕೆ ಎರಡನೇ ಪತ್ರ ಬರೆದ ಬಳಿಕ ಇದೀಗ ಕೇಂದ್ರ ಸರ್ಕಾರ ಸ್ಪಂದನೆ ನೀಡಿದ್ದು, ಇದುವರೆಗೂ 9,000 ಸಿಲಿಂಡರ್ ಪರೋಕೆ ಮಾಡುತ್ತಿದ್ದು ಇದೀಗ ಹೆಚ್ಚುವರಿ 20% ಸಿಲಿಂಡರ್ ಕೊಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಹಾಗಾಗಿ ನಿತ್ಯ ರಾಜ್ಯಕ್ಕೆ 10,000 ಕಮರ್ಷಿಯಲ್ ಸಿಲಿಂಡರ್ ಸಿಗುತ್ತೆ ಮುಂದಿನ ಸೋಮವಾರ ನಾವು ಮತ್ತೊಮ್ಮೆ ಸಭೆ ಸೇರುತ್ತೇವೆ. ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ 25 ದಿನ ಅವಕಾಶ ಕೊಟ್ಟಿದ್ದೇವೆ ಎಂದು ತಿಳಿಸಿದರು.








