ಕೊಪ್ಪಳ : ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕರಿಯಣ್ಣ. ಹೆಚ್ . ಸಂಗಟಿ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಸಂಗಟಿ ಕರಿಯಣ್ಣ ಅವರು ತಮ್ಮ ಜನಮುಖಿ ಕೆಲಸಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜನಪ್ರಿಯ ರಾಗಿದ್ದರು. ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ, ಕಾಳಿದಾಸ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ,ರಾಜೀವ್ ಗಾಂಧಿ ಯುವ ಮಂಡಲದ ಅಧ್ಯಕ್ಷರಾಗಿ ಹಾಗೂ ಜಿಲ್ಲೆಯ ವಿವಿಧ ಹುದ್ದೆಗಳಲ್ಲಿ ಅವರು ಅತ್ಯಂತ ಕ್ಷಮತೆಯಿಂದ ಕಾರ್ಯನಿರ್ವಹಿಸಿದ್ದರು.
ವಿಧಾನ ಪರಿಷತ್ತಿನ ಸದಸ್ಯರಾಗಿ ಒಳ್ಳೆಯ ಸಂಸದೀಯ ಪಟುವಾಗಿ ಗುರುತಿಸಿಕೊಂಡಿದ್ದರು. ಅವರ ನಿಧನ ನೋವನ್ನುಂಟು ಮಾಡಿದೆ. ಅವರ ಕುಟುಂಬಕ್ಕೆ ಹಾಗೂ ಅವರ ಅನುಯಾಯಿಗಳಿಗೆ ಈ ದುಃಖ ಭರಿಸುವ ಶಕ್ತಿ ಭಗವಂತ ಕೊಡಲಿ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.








