ಬೆಂಗಳೂರು: ರಾಜ್ಯದಲ್ಲಿ ಕೃಷಿ ಅಧಿಕಾರಿಗಳ ನೇಮಕಾತಿ ಈಗ ಮತ್ತಷ್ಟು ಪಾರದರ್ಶಕಗೊಳಿಸಲಾಗಿದೆ ಎಂಬುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಕೃಷಿ ಇಲಾಖೆಯ ಎಓ ಮತ್ತು ಎಎಓ ಹುದ್ದೆಗಳ ನೇಮಕಾತಿ ಹೊಣೆಯನ್ನು ಕೆಪಿಎಸ್ಸಿ ಬದಲಿಗೆ ಕೆಇಎಗೆ ಹಸ್ತಾಂತರಿಸಿರುವುದಾಗಿ ತಿಳಿಸಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ ಲಕ್ಷಾಂತರ ರೈತಾಪಿ ಕುಟುಂಬಗಳ ಆಶೋತ್ತರಗಳಿಗೆ ಸ್ಪಂದಿಸುವುದು ನಮ್ಮ ಸರ್ಕಾರದ ಮೊದಲ ಆದ್ಯತೆ. ಕಳೆದ ವರ್ಷ ಕೃಷಿ ಇಲಾಖೆಯ ಸುಮಾರು 945 ಕೃಷಿ ಅಧಿಕಾರಿ (AO) ಹಾಗೂ ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿಯನ್ನು KPSC ಮೂಲಕ ನಡೆಸಲು ಆದೇಶಿಸಲಾಗಿತ್ತು ಎಂದಿದ್ದಾರೆ.
ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ ಲಕ್ಷಾಂತರ ರೈತಾಪಿ ಕುಟುಂಬಗಳ ಆಶೋತ್ತರಗಳಿಗೆ ಸ್ಪಂದಿಸುವುದು ನಮ್ಮ ಸರ್ಕಾರದ ಮೊದಲ ಆದ್ಯತೆ.
ಕಳೆದ ವರ್ಷ ಕೃಷಿ ಇಲಾಖೆಯ ಸುಮಾರು 945 ಕೃಷಿ ಅಧಿಕಾರಿ (AO) ಹಾಗೂ ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿಯನ್ನು KPSC ಮೂಲಕ ನಡೆಸಲು ಆದೇಶಿಸಲಾಗಿತ್ತು.
1/4 pic.twitter.com/5PnlltlOlC
— N Cheluvarayaswamy (@NCheluvarayaS) March 23, 2026
ಆದರೆ, ಈ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಇರಬೇಕು ಮತ್ತು ಶೀಘ್ರವಾಗಿ ನೇಮಕಾತಿ ನಡೆಯಬೇಕು ಎಂಬುದು ರಾಜ್ಯದ ಸಾವಿರಾರು ಅಭ್ಯರ್ಥಿಗಳ ಮನವಿ ಹಾಗೂ ಒತ್ತಾಯವಾಗಿತ್ತು. ಈ ನ್ಯಾಯಯುತ ಬೇಡಿಕೆಯನ್ನು ಪರಿಗಣಿಸಿ, KPSC ಮೂಲಕ ನೇಮಕಾತಿ ನಡೆಸುವ ಹಳೆಯ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಇಂದು ರದ್ದುಗೊಳಿಸಿದ್ದೇವೆ ಎಂಬುದಾಗಿ ತಿಳಿಸಿದ್ದಾರೆ.
ಆದರೆ, ಈ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಇರಬೇಕು ಮತ್ತು ಶೀಘ್ರವಾಗಿ ನೇಮಕಾತಿ ನಡೆಯಬೇಕು ಎಂಬುದು ರಾಜ್ಯದ ಸಾವಿರಾರು ಅಭ್ಯರ್ಥಿಗಳ ಮನವಿ ಹಾಗೂ ಒತ್ತಾಯವಾಗಿತ್ತು.
ಈ ನ್ಯಾಯಯುತ ಬೇಡಿಕೆಯನ್ನು ಪರಿಗಣಿಸಿ, KPSC ಮೂಲಕ ನೇಮಕಾತಿ ನಡೆಸುವ ಹಳೆಯ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಇಂದು ರದ್ದುಗೊಳಿಸಿದ್ದೇವೆ.
2/4
— N Cheluvarayaswamy (@NCheluvarayaS) March 23, 2026
ಈ ಎಲ್ಲಾ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಇನ್ನು ಮುಂದೆ KEA ಮೂಲಕವೇ ನಡೆಸಲು ಅಧಿಕೃತವಾಗಿ ಆದೇಶ ಹೊರಡಿಸಿದ್ದೇವೆ. ಪಾರದರ್ಶಕತೆ ಮತ್ತು ಅರ್ಹತೆಗೆ ಆದ್ಯತೆ ನೀಡುವುದು ನಮ್ಮ ಬದ್ಧತೆ. ಗ್ರಾಮೀಣ ಭಾಗದ, ಕೃಷಿ ಕುಟುಂಬದ ಹಿನ್ನೆಲೆಯುಳ್ಳ ಪ್ರತಿಭಾವಂತ ಯುವಕರಿಗೆ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಈ ಎಲ್ಲಾ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಇನ್ನು ಮುಂದೆ KEA ಮೂಲಕವೇ ನಡೆಸಲು ಅಧಿಕೃತವಾಗಿ ಆದೇಶ ಹೊರಡಿಸಿದ್ದೇವೆ.
ಪಾರದರ್ಶಕತೆ ಮತ್ತು ಅರ್ಹತೆಗೆ ಆದ್ಯತೆ ನೀಡುವುದು ನಮ್ಮ ಬದ್ಧತೆ. ಗ್ರಾಮೀಣ ಭಾಗದ, ಕೃಷಿ ಕುಟುಂಬದ ಹಿನ್ನೆಲೆಯುಳ್ಳ ಪ್ರತಿಭಾವಂತ ಯುವಕರಿಗೆ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ.
3/4
— N Cheluvarayaswamy (@NCheluvarayaS) March 23, 2026
ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಎಲ್ಲಾ ಅಭ್ಯರ್ಥಿಗಳಿಗೆ ನನ್ನ ಕಡೆಯಿಂದ ಶುಭ ಹಾರೈಕೆಗಳು. ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿ, ನಮ್ಮ ಸರ್ಕಾರ ಸದಾ ನಿಮ್ಮ ಬೆನ್ನಿಗಿರುತ್ತದೆ ಅಂತ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಯುಗಾದಿ ಪ್ರಯುಕ್ತ ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರ ವಿಶೇಷ ದಾಳಿ; 1,189 ಮಂದಿ ವಶಕ್ಕೆ!
EPFO ಮಾಸ್ಟರ್ ಪ್ಲಾನ್: 10,181 ಕೋಟಿ ರೂ. ಹಕ್ಕು ಪಡೆಯದ ಹಣ ಪಾವತಿಗೆ ‘ಆಟೋ-ಸೆಟಲ್ಮೆಂಟ್’ ಫೀಚರ್ ಜಾರಿ!








