ಬೆಂಗಳೂರು : ಬೆಂಗಳೂರು ರಾಯಲ್ ಚಾಲೆಂಜರ್ಸ್ (RCB) ತಂಡದ ಈ ಬಾರಿಯ ಕ್ರೀಡಾ ಋತುವಿಗೆ ಕರ್ನಾಟಕ ಹಾಲು ಮಹಾಮಂಡಳಿ (KMF) ಅಧಿಕೃತ ಪಾಲುದಾರನಾಗಿ (Official Partner) ಒಪ್ಪಂದ ಮಾಡಿಕೊಂಡಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಅವರು ಅಧಿಕೃತವಾಗಿ ತಿಳಿಸಿದ್ದಾರೆ. ಈ ಮೂಲಕ ಸ್ಥಳೀಯ ಬ್ರ್ಯಾಂಡ್ ‘ನಂದಿನಿ’ಯನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಗುರುತಿಸುವಂತೆ ಮಾಡುವುದು ಮಂಡಳಿಯ ಉದ್ದೇಶವಾಗಿದೆ.
2026 ಆವೃತ್ತಿಯಲ್ಲಿ ಆರ್ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದೆ ಈ ಮೂಲಕ ನಂದಿನಿ ಉತ್ಪನ್ನಗಳು ದೇಶಕ್ಕೆ ಪರಿಚಯವಾಗಲಿದೆ. ಆರ್ಸಿಬಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡವಾಗಿದೆ. ಹಾಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಂದಿನಿ ಉತ್ಪನ್ನ ಪರಿಚಯಿಸಲಾಗುತ್ತದೆ ಕೆಎಂಎಫ್ ಉತ್ಪನ್ನ ಪ್ರಚಾರಕ್ಕೆ ವಿರಾಟ್, ಕೊಹ್ಲಿ ರಜತ್ ಪಾಟೀದಾರ್, ದೇವದತ್ತ ಪಡಿಕಲ್ 4 ಕೋಟಿ ವೆಚ್ಚದಲ್ಲಿ ಕೆಎಂಎಫ್ ಒಂದು ವರ್ಷದ ಟೆಂಡರ್ ಪಡೆದಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಶಿವ ಸ್ವಾಮಿ ಹೇಳಿಕೆ ನೀಡಿದರು.








