ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ಗಂಟೆಯಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಲಬುರಗಿ, ಯಾದಗಿರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ.
ಮುಂದಿನ 5 ದಿನಗಳಲ್ಲಿ ರಾಜ್ಯದ 10 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ!
ಇನ್ನು ಮುಂದಿನ 5 ದಿನಗಳಲ್ಲಿ ರಾಜ್ಯದ 10 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಸ್ಥಳೀಯರು ಮುಂಜಾಗ್ರತಾ ಕ್ರಮವಹಿಸಲು ಸೂಚನೆ ನೀಡಿದೆ. ತಮಿಳುನಾಡು ಮತ್ತು ಕರ್ನಾಟಕದ ಒಳನಾಡಿನಾದ್ಯಂತ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಇರಲಿದೆ. ಈ ಹಿನ್ನೆಲೆ ಮಾರ್ಚ್ 23 ರಿಂದ 5 ದಿನ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಗದಗ, ಹಾವೇರಿ, ಯಾದಗಿರಿ, ಕಲಬುರಗಿ, ಚಿತ್ರದುರ್ಗ, ವಿಜಯನಗರ, ದಕ್ಷಿಣ ಕ್ನನಡ, ಬಾಗಲಕೋಟೆ, ಧಾರವಾಡ, ವಿಜಯಪುರ, ಚಿಕ್ಕಮಗಳೂರು , ಕೊಡಗ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸೋಮವಾರ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.








