ಕಲಬುರ್ಗಿ : ಕಲಬುರ್ಗಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುತ್ತಿದ್ದು, ಜಿಲ್ಲೆಯ ಚಿಂಚೋಳಿ ತಾಲೂಕಿನ ಶಾದಿಪುರ ತಾಂಡಾದಲ್ಲಿ ಸಿಡಿಲು ಬಡಿದು ರೈತ ಸಾವನಪ್ಪಿದ್ದಾನೆ.
ಕೃಷಿ ಕೆಲಸ ಮಾಡುತ್ತಿದ್ದ ರೈತ ಮಹೇಶ್ ಚವ್ಹಾಣ (24) ಎಂಬ ಯುವ ರೈತ ಸಾವನಪ್ಪಿದ್ದಾನೆ. ಕಲಬುರ್ಗಿ ಜಿಲ್ಲೆ ಸೇರಿದಂತೆ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುತ್ತಿದೆ. ಹಾಗಾಗಿ ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.








