ಕೋಲಾರ : ಕೋಲಾರದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಹಳೆಯ ಮನೆ ಕುಸಿದು ಬಿದ್ದು ಬಾಲಕಿ ಸಾವನ್ನಪ್ಪಿದ ಘಟನೆ ಮುಳಬಾಗಿಲು ನಗರದಲ್ಲಿ ನಡೆದಿದೆ. ಈ ಅವಘಡದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ಬಾಲಕಿಯನ್ನು ವಹಿನೂರ್ (15) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸುಹೇಲ್, ಕೌಸರ್, ಅಯಾಜ್ ಮತ್ತು ಅಬ್ಜರ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.








