ಮುಂಬೈ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 100 ಡಾಲರ್‌ಗಿಂತ ಕೆಳಮಟ್ಟದಲ್ಲಿ ಸ್ಥಿರವಾಗಿರುವುದು ಭಾರತೀಯ ಷೇರು ಮಾರುಕಟ್ಟೆಗೆ ವರದಾನವಾಗಿ ಪರಿಣಮಿಸಿದೆ. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಕಡಿಮೆಯಾಗುತ್ತಿರುವ ಮುನ್ಸೂಚನೆ ಸಿಗುತ್ತಿದ್ದಂತೆ, ಬುಧವಾರದ ವಹಿವಾಟಿನಲ್ಲೂ ಸೆನ್ಸೆಕ್ಸ್ ಮತ್ತು ನಿಫ್ಟಿ ಭರ್ಜರಿ ಏರಿಕೆ ದಾಖಲಿಸಿವೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಕುಸಿದಿರುವುದು ಭಾರತದ ಹಣದುಬ್ಬರ ನಿಯಂತ್ರಣಕ್ಕೆ ಸಹಕಾರಿಯಾಗಲಿದೆ ಎಂಬ ಆಶಾವಾದ ಹೂಡಿಕೆದಾರರಲ್ಲಿ ಮೂಡಿದೆ. ಇದು ಮಾರುಕಟ್ಟೆಯಲ್ಲಿ ಸತತ ಎರಡನೇ ದಿನವೂ ಖರೀದಿ ಉತ್ಸಾಹ ಹೆಚ್ಚಿಸಿದೆ.
ಎನ್‌ಎಸ್‌ಇ ನಿಫ್ಟಿ ಸತತವಾಗಿ ಏರಿಕೆ ಕಾಣುತ್ತಿದ್ದು, 23,100 ಪಾಯಿಂಟ್‌ಗಳ ಮಟ್ಟವನ್ನು ದಾಟುವ ಮೂಲಕ ಬಲವಾದ ಚೇತರಿಕೆ ಪ್ರದರ್ಶಿಸಿದೆ.
ಬಿಎಸ್‌ಇ ಸೆನ್ಸೆಕ್ಸ್ ಕೂಡ 600ಕ್ಕೂ ಹೆಚ್ಚು ಪಾಯಿಂಟ್‌ಗಳ ಏರಿಕೆ ಕಂಡು 74,200 ರ ಗಡಿಯಲ್ಲಿ ವಹಿವಾಟು ನಡೆಸುತ್ತಿದೆ.








