ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಕಾಂಗ್ರೆಸ್ ಶಾಸಕ ಸತೀಶ ಸೈಲ್ ಆಪ್ತ ಗೋಪಾಲಕೃಷ್ಣ ನಾಯಕ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕಾರವಾರ ಪೊಲೀಸರು ನಾಲ್ವರ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಅಂಕೋಲಾ ತಾಲೂಕಿನ ಕಿಣಿ ಬಳಿ ಎಂದು ಬೆಳಿಗ್ಗೆ ಚಾಕು ಇರಿದ ಘಟನೆ ನಡೆದಿತ್ತು.
ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಿಣಿ ಗ್ರಾಮದಲ್ಲಿ ಈ ಒಂದು ಕೊಲೆ ಪ್ರಕರಣ ನಡೆದಿದೆ. ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಗೆ ಆರೋಪಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದರು.ಸದ್ಯ ಗೋವಾ ಗಡಿಯಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ನಾಲ್ವರನ್ನು ವಶಕ್ಕೆ ಪಡೆದಿದ್ದೇವೆ ಚಾಕುವಿನಿಂದ ಇರಿದು ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದರು. ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬರಲಿದೆ ಎಂದು ಉತ್ತರ ಕನ್ನಡ ಎಸ್ ಪಿ ಎಂ. ಎನ್ ದೀಪನ್ ಮಾಹಿತಿ ನೀಡಿದರು.








