ಬೆಂಗಳೂರ :ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2001-02 ರಿಂದ 2014-15 ನೇ ಶೈಕ್ಷಣಿಕ ಸಾಲುಗಳಲ್ಲಿ ಯುಜಿ/ಪಿ.ಜಿ ಕೋರ್ಸ್ಗಳಾದ ಬಿ.ಎ, ಬಿ.ಕಾಂ, ಬಿ.ಲಿಬ್ ಐ.ಎಸ್ಸಿ, ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಎಸ್ಸಿ, ಎಲ್ ಎಲ್ ಎಂ, ಎಂಲಿಬ್ ಐ.ಎಸ್ಸಿ ಮತ್ತು ಬಿ.ಎಡ್, ಬಿ.ಎಡ್, ಎಂ.ಎಡ್ ಗಳಿಗೆ ಪ್ರವೇಶ ಪಡೆದಯ ಪರೀಕ್ಷೇಗಳನ್ನು ತೆಗೆದುಕೊಂಡಿರದ/ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ವಿವಿಯು ಪರೀಕ್ಷಾ ಶುಲ್ಕವನ್ನು ಪಾವತಿಸಲು ಅವಕಾಶವನ್ನು ಕಲ್ಪಸಿದೆ
ಪರೀಕ್ಷಾ ಶುಲ್ಕವನ್ನು ಪಾವತಿಸಲು ದಂಡ ಶುಲ್ಕವಿಲ್ಲದೆ ಮಾರ್ಚ್ 30 ಹಾಗೂ ಏಪ್ರಿಲ್ 6 ರಂದು ದಂಡ ಶುಲ್ಕದೊಡನೆ ರೂ.200 ಪಾವತಿಸಲು ಕೊನೆಯ ದಿನ. ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ www.ksoumysuru.ac.in ಮೂಲಕ ಪರೀಕ್ಷಾ ಶುಲ್ಕವನ್ನು ಪಾವತಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-1, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ ಸ್ಯಾಟಿಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ದೂರವಾಣಿ: 080-26603664 ಅಥವಾ 9880526439/9019526439 ಮೂಲಕ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








