ನವದೆಹಲಿ: ಸಾವಿರಾರು ಕೋಟಿ ರೂಪಾಯಿಗಳ ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ವಂಚನೆ ಪ್ರಕರಣದ ಪ್ರಮುಖ ಆರೋಪಿ, ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿಗೆ ಬ್ರಿಟನ್ ನ್ಯಾಯಾಲಯದಲ್ಲಿ ಅಂತಿಮವಾಗಿ ಸೋಲಾಗಿದೆ. ಭಾರತಕ್ಕೆ ತನ್ನನ್ನು ಹಸ್ತಾಂತರಿಸಬಾರದು ಎಂದು ಕೋರಿ ಸಲ್ಲಿಸಿದ್ದ ಕೊನೆಯ ಹಂತದ ಅರ್ಜಿಯನ್ನು ಲಂಡನ್ನ ಹೈಕೋರ್ಟ್ ತಿರಸ್ಕರಿಸಿದೆ.
ನೀರವ್ ಮೋದಿ ತನ್ನ ಮಾನಸಿಕ ಆರೋಗ್ಯದ ಸ್ಥಿತಿ ಮತ್ತು ಭಾರತದ ಜೈಲುಗಳ ಸ್ಥಿತಿಗತಿಯನ್ನು ಕಾರಣವಾಗಿಟ್ಟುಕೊಂಡು ಹಸ್ತಾಂತರಕ್ಕೆ ತಡೆ ಕೋರಿದ್ದರು. ಆದರೆ:ನೀರವ್ ಮೋದಿ ಸಲ್ಲಿಸಿದ್ದ ಎಲ್ಲಾ ವಾದಗಳನ್ನು ಬ್ರಿಟನ್ ನ್ಯಾಯಾಧೀಶರು ತಳ್ಳಿಹಾಕಿದ್ದಾರೆ.
ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ ನೀರವ್ ಮೋದಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದಾಗಿ ಭಾರತ ಸರ್ಕಾರ ನೀಡಿದ ಭರವಸೆಯನ್ನು ನ್ಯಾಯಾಲಯ ಪುರಸ್ಕರಿಸಿದೆ.ಈ ತೀರ್ಪಿನೊಂದಿಗೆ ನೀರವ್ ಮೋದಿಯನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆಯಲ್ಲಿ ಇದ್ದ ಎಲ್ಲಾ ಕಾನೂನು ಅಡೆತಡೆಗಳು ಬಹುತೇಕ ನಿವಾರಣೆಯಾದಂತಾಗಿದೆ.








