ಚಿಕ್ಕಬಳ್ಳಾಪುರ : ಇರಾನ್ ಇಸ್ರೇಲ್ ಯುದ್ಧದ ಪರಿಣಾಮದಿಂದ ಈಗಾಗಲೇ ದೇಶ ಹಾಗೂ ರಾಜ್ಯದಲ್ಲಿ ಗ್ಯಾಸ್ ಹಾಗು ಪೆಟ್ರೋಲ್ ಡೀಸೆಲ್ ಕೊರತೆ ಕಾಣುತ್ತಿದೆ. ಇದರ ಮಧ್ಯ ಚಿಕ್ಕಬಳ್ಳಾಪುರದಲ್ಲಿ ಪೆಟ್ರೋಲ್ ಡೀಸೆಲ್ ದರದಲ್ಲಿ ಭಾರಿ ಏರಿಕೆ ಮಾಡಲಾಗಿದೆ.
ಹೌದು ರಾಜ್ಯದಲ್ಲಿ ಪೆಟ್ರೋಲ್ ಅಭಾವದ ವದಂತಿ ಹಬ್ಬಿದ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ತುಂಬಿಸಿಕೊಳ್ಳಲು ಜನ ಮುಗಿಬೀಳುತ್ತಿದ್ದಾರೆ. ಬಂಕ್‌ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಈ ಮಧ್ಯೆ ಚಿಕ್ಕಬಳ್ಳಾಪುರದ ನಯಾರ ಪೆಟ್ರೋಲ್ ಬಂಕ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದೆ.
ಪೆಟ್ರೋಲ್ ಪ್ರತಿ ಲೀಟರ್ ಮೇಲಿನ ದರ 5 ರೂಪಾಯಿ ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲಾಗಿದೆ. ಇದರಿಂದ 1 ಲೀಟರ್ ಪೆಟ್ರೋಲ್ ಬೆಲೆ 108.28 ರೂ.ಗಳಿಗೆ ತಲುಪಿದ್ದರೆ, ಡೀಸೆಲ್ ಬೆಲೆ 1 ಲೀಟರ್‌ಗೆ 94.10 ರೂ.ಗಳಿಗೆ ಮಾರಾಟ ಮಾಡಲಾಗ್ತಿದೆ.








