ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಹೈಕೋರ್ಟ್ ತುರ್ತು ನೋಟೀಸ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸ್ ಹಾಗೂ ಜಾರಿ ನಿರ್ದೇಶನಲಯಕ್ಕೂ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ವಿರುದ್ಧದ ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ದೇವರಾಜುಗೆ ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದೆ. ಲೋಕಾಯುಕ್ತ ಬಿ ರಿಪೋರ್ಟ್ ಅನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ವೇಳೆ ಹೈಕೋರ್ಟ್ ವಿಚಾರಣೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ತುರ್ತು ನೋಟಿಸ್ ಜಾರಿ ಮಾಡಿದ್ದು, ಅಲ್ಲದೇ ಲೋಕಾಯುಕ್ತ ಪೊಲೀಸರು, ಜಾರಿ ನಿರ್ದೇಶನಲಯಕ್ಕೆ ನೋಟಿಸ್ ಜಾರಿ ಮಾಡಿದೆ. ಬೀ ರಿಪೋರ್ಟ್ ವಿಚಾರಣಾ ಸಮಿತಿ ವರದಿಯಂತಿದೆ ಎಂದು ವಾದ ಮಡಿಸಲಾಯಿತು. ದೂರುದಾರ ಪರವಾಗಿ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದರು. ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿ ಹೈಕೋರ್ಟ್ ವಿಚಾರಣೆ ಮುಂದೂಡಿತು.







