ಬೆಂಗಳೂರು : ಕಳೆದ ವರ್ಷ ಜೂನ್ ನಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರ ಸಾವಿನ ಹಿನ್ನೆಲೆಯಲ್ಲಿ ಬಿಸಿಸಿಐ ಈ ಬಾರಿ ಉದ್ಘಾಟನಾ ಸಮಾರಂಭ ರದ್ದುಗೊಳಿಸಿದೆ. ಮೃತರಿಗೆ ಗೌರವಾರ್ಥವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಐಪಿಎಲ್ 2026 ಮಾರ್ಚ್ 28 ರಂದು ಬೆಂಗಳೂರಿನಲ್ಲಿ ಆರ್ಸಿಬಿ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವೆ ಆರಂಭವಾಗಲಿದೆ.
ಹಾಲಿ ಚಾಂಪಿಯನ್ ಆರ್ಸಿಬಿ ಹಾಗೂ ಸನ್ರೈಸರ್ಸ್ ಹೈದರಾಬಾದ್ ನಡುವೆ ಸಂಜೆ 7:30 ರಿಂದ ಆರಂಭವಾಗಲಿದೆ. ಆದಾಗ್ಯೂ ಪ್ರತಿ ಆವೃತ್ತಿಯ ಮೊದಲ ಪಂದ್ಯ ನಡೆಯುವುದಕ್ಕೂ ಮುನ್ನ ಉದ್ಘಾಟನಾ ಸಮಾರಂಭ ನಡೆಯುವುದು ವಾಡಿಕೆ. ಆದರೆ ಈ ಆವೃತ್ತಿಯಲ್ಲಿ ಉದ್ಘಾಟನಾ ಸಮಾರಂಭವನ್ನು ನಡೆಸದಿರಲು ಬಿಸಿಸಿಐ ನಿರ್ಧರಿಸಿದೆ.
ಕಳೆದ ಆವೃತ್ತಿಯಲ್ಲಿ ಆರ್ಸಿಬಿ ತನ್ನ ಮೊದಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಹೀಗಾಗಿ ಜೂನ್ 4, 2025 ರಂದು ನಡೆದಿದ್ದ ವಿಜಯೋತ್ಸವದ ಸಮಯದಲ್ಲಿ ಕಾಲ್ತುಳಿತ ಸಂಭವಿಸಿ11 ಜನರು ಸಾವನ್ನಪ್ಪಿದರು. ಈ ಕಾರಣದಿಂದಾಗಿ ಈ ಆವೃತ್ತಿಯ ಉದ್ಘಾಟನಾ ಸಮಾರಂಭವನ್ನು ನಡೆಸದಿರಲು ಬಿಸಿಸಿಐ ನಿರ್ಧರಿಸಿದೆ. ಆದಾಗ್ಯೂ, ಈ ಐಪಿಎಲ್ನ ಸಮಾರೋಪ ಸಮಾರಂಭವನ್ನು ಮೇ 31 ರಂದು ನಡೆಸಬಹುದು ಎಂದು ಬಿಸಿಸಿಐ ಕಾರ್ಯದರ್ಶಿ ದೇವ್ಜಿತ್ ಸೈಕಿಯಾ ಹೇಳಿರುವುದಾಗಿ TOI ಉಲ್ಲೇಖಿಸಿದೆ.







