ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ಈಗ ಕುತೂಹಲಕಾರಿ ಘಟ್ಟಕ್ಕೆ ತಲುಪಿದೆ. ಗುರುವಾರ ನಡೆದ ನಾಮಪತ್ರ ವಾಪಸ್ ಪಡೆಯುವ ಪ್ರಕ್ರಿಯೆಯಲ್ಲಿ ವಿವಿಧ ಪಕ್ಷ ಹಾಗೂ ಪಕ್ಷೇತರರಾಗಿ ಸ್ಪರ್ಧಿಸಿದ್ದ ಒಟ್ಟು 11 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಹಿಂತೆಗೆದುಕೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದ್ದಾರೆ.
ನಾಮಪತ್ರ ಹಿಂಪಡೆದ ಅಭ್ಯರ್ಥಿಗಳ ವಿವರ:
ಚುನಾವಣಾ ನಿಯಮ 9 (2)ರ ಅನ್ವಯ ಆನಂದಪ್ಪ ಎಸ್.ಎಲ್, ಸುಭಾನ್ ಖಾನ್, ಹೆಚ್. ಪರವೇಜ್, ಅಲ್ಲಾಭಕ್ಷ ಬಿ, ಅಮ್ಮಿರಾ ಅಹಮ್ಮದ್ ಖಾನ್, ಇಸ್ಮಾಯಿಲ್ ಜಬೀವುಲ್ಲಾ, ಎಸ್.ಕೆ. ಅಫೈಲ್ ಖಾನ್, ಎಸ್.ಸಿ. ತ್ರಿಮೂರ್ತಿ, ಮಹಮ್ಮದ್ ಜಬೀವುಲ್ಲಾ, ಸೈಯದ್ ಜಬೀವುಲ್ಲಾ ಹಾಗೂ ಡಿ. ಹನುಮಂತಪ್ಪ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಈ ಬೆಳವಣಿಗೆಯಿಂದಾಗಿ ಕ್ಷೇತ್ರದಲ್ಲಿ ಈಗ ಅಂತಿಮವಾಗಿ ಎಷ್ಟು ಅಭ್ಯರ್ಥಿಗಳು ಕಣದಲ್ಲಿ ಉಳಿಯಲಿದ್ದಾರೆ ಎಂಬ ಚಿತ್ರಣ ಸ್ಪಷ್ಟಗೊಂಡಿದೆ.
ಚೆಕ್ಪೋಸ್ಟ್ನಲ್ಲಿ ಜಿಲ್ಲಾಧಿಕಾರಿಗಳ ಮಿಂಚಿನ ಭೇಟಿ:
ಉಪಚುನಾವಣೆಯ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ. ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಇಂದು ಕೊಂಡಜ್ಜಿ ರಸ್ತೆಯ ಶಿವಪುರ ಚೆಕ್ಪೋಸ್ಟ್ಗೆ ಭೇಟಿ ನೀಡಿ, ವಾಹನ ತಪಾಸಣಾ ಕಾರ್ಯವನ್ನು ಖುದ್ದಾಗಿ ವೀಕ್ಷಿಸಿದರು.
ತಪಾಸಣೆಯ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಅಕ್ರಮ ಹಣ ಸಾಗಾಟ, ಮದ್ಯದ ಅಕ್ರಮ ಚಟುವಟಿಕೆಗಳು ಹಾಗೂ ಮತದಾರರಿಗೆ ಹಂಚಲು ಸಾಗಿಸುವ ಉಡುಗೊರೆಗಳ ಮೇಲೆ ತೀವ್ರ ನಿಗಾ ವಹಿಸುವಂತೆ ಆದೇಶಿಸಿದರು. ನಿಯೋಜನೆಗೊಂಡಿರುವ ಸಿಬ್ಬಂದಿಯು ವಾಹನಗಳನ್ನು ತಪಾಸಣೆ ಮಾಡುವ ವಿಧಾನವನ್ನು ಪರಿಶೀಲಿಸಿದ ಅವರು, ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಚುನಾವಣಾ ವಿಭಾಗದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕೇವಲ ದಿನಕ್ಕೆ 100 ರೂಪಾಯಿ ಉಳಿಸಿ, 24 ಲಕ್ಷದ ಒಡೆಯರಾಗಿ! ಸರ್ಕಾರದ ಈ ಸ್ಕೀಮ್ ಸೂಪರ್!
BREAKING : ಬೆಂಗಳೂರು ಕಾಲ್ತುಳಿತ ಸಂತ್ರಸ್ತರಿಗೆ ಗೌರವಾರ್ಥ 2026ರ ‘IPL ಉದ್ಘಾಟನಾ ಸಮಾರಂಭ’ ರದ್ದು!








