ವಿಜಯಪುರ : ವಿಜಯಪುರದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಪುಟ್ಟ ಪುಟ್ಟ ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ರಾಜಶ್ರೀ ಶಂಕ್ರಪ್ಪ ಹಳ್ಳೂರ (28) ಮತ್ತು ಅವರ ಆರು, ಮೂರು ಹೆಣ್ಣುಮಕ್ಕಳು ಮತ್ತು ವರ್ಷದ ಗಂಡು ಮಗುವಿನೊಂದಿಗೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಈ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ರಾಜಶ್ರೀ ಅವರ ಪತಿ ಶಂಕ್ರಪ್ಪ ಖಾಸಗಿ ಬಸ್ ಚಾಲಕನಾಗಿದ್ದು, ಪತಿ ಊರಲ್ಲಿ ಇಲ್ಲದ ವೇಳೆ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಇಂಡಿ ಗ್ರಾಮೀಣ ಪೊಲೀಸರ ಭೇಟಿ ನೀಡಿ, ಪರಿಶೀಲಿಸಿದರು.
ಪತಿ ಹಾಗೂ ರಾಜಶ್ರೀ ತವರು ಮನೆಯವರು ಬಂದ ಬಳಿಕ ಮುಂದಿನ ಪ್ರಕ್ರಿಯೆ ನಡೆಸುವುದಾಗಿ ಪೊಲೀಸರು ತಿಳಿಸಿದರು. ಪೊಲೀಸರ ತನಿಖೆ ಬಳಿಕ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರಲಿದೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.








