ಬೆಂಗಳೂರು : ಉದ್ಯೋಗ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಇದೀಗ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಪರಿಶಿಷ್ಟ ಜಾತಿ (ಎಸ್ಸಿ) ಒಳಮೀಸಲಾತಿ ಹಂಚಿಕೆಯಾಗದೆಯೇ ನೇಮಕಾತಿ ಪ್ರಕ್ರಿಯೆಗಳು ಮುಂದುವರಿಯಲಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.
ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದ್ದು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಆಗಿರುವುದರಿಂದ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಒಳಮೀಸಲಾತಿ ಕುರಿತಂತೆ ಯಾವುದೇ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಈ ನಿರ್ಣಯಕ್ಕೆ ಬರಲಾಗಿದೆ.
ಆದರೆ, ಈಗಾಗಲೇ ದಲಿತ ಸಂಘಟನೆಗಳು ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಸಾಕಷ್ಟು ಪ್ರತಿಭಟನೆಗಳು ನಡೆಸಿದ್ದು, ಮೂರ್ನಾಲ್ಕು ದಶಕಗಳಿಂದ ನಡೆಸುತ್ತಿರುವ ಹೋರಾಟಕ್ಕೆ ನ್ಯಾಯ ಸಿಗದಿರುವ ಬಗ್ಗೆ ಅಸಮಾಧಾನ ಹೊರಹಾಕಿವೆ. ಈ ಹಂತದಲ್ಲಿ ವಿಶೇಷ ಸಂಪುಟ ಸಭೆ ಮುಂದೂಡಿಕೆಯಾಗಿದ್ದು, ಉಪಚುನಾವಣೆ ಮುಗಿಯುವವರೆಗೆ ಸಮಾಧಾನದಿಂದ ಇರುವುದು ಅನಿವಾರ್ಯವಾಗಿದೆ.








