ಬೆಂಗಳೂರು : ಬೆಂಗಳೂರಿನಲ್ಲಿ ಗೂಗಲ್ ಮ್ಯಾಪ್ ನಿಂದ ದೊಡ್ಡ ಅನಾಹುತವೇ ನಡೆದಿದೆ. ಗೋಡೌನ್ ಗೆ ಟ್ರಕ್ ಡಿಕ್ಕಿ ಆಗಿ ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಸಾವನಪ್ಪಿದ್ದಾನೆ. ಕುರುಬರಹಳ್ಳಿ ಬಳಿ ರಾಜಕಾಲುವೆಗೆ ಟ್ರಕ್ ನುಗ್ಗಿ ಈ ಒಂದು ಘಟನೆ ನಡೆದಿದೆ. ಆಂಧ್ರ ಪ್ರದೇಶದಿಂದ ಕಬ್ಬಿಣದ ಸರಳುಗಳನ್ನು ಹೊತ್ತು ಲಾರಿ ಬಂದಿದೆ. ಸುಂಕದ ಕಟ್ಟಿದ ಕಡೆಗೆ ಲಾರಿ ಸಾಗುತ್ತಿತ್ತು.
ಗೂಗಲ್ ಮ್ಯಾಪ್ ನೋಡಿಕೊಂಡು ಚಾಲಕ ಲಾರಿ ಓಡಿಸುತ್ತಿದ್ದ ಕುರುಬರಹಳ್ಳಿ ಮೂಲಕ ದಾರಿ ತೋರಿಸುತ್ತಿತ್ತು. ಆದರೆ ಕುರುಬರಹಳ್ಳಿ ಬಳಿ ಬಹುತೇಕ ಇಳಿಜಾರು ಪ್ರದೇಶ ಇದೆ ಹಾಗಾಗಿ ಲಾರಿ ನಿಯಂತ್ರಣಕ್ಕೆ ಸಿಕ್ಕಿಲ್ಲ ರಾಜಕಾಲುವೆಗೆ ಲಾರಿ ಗುದ್ದಿದೆ ಡಿಕ್ಕಿ ಆದ ರಭಸಕ್ಕೆ ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಲಾರಿ ಡಿಕ್ಕಿಯಾದ ಪರಿಣಾಮ ಕಾರೊಳಗೆ ಮಲಗಿದ್ದ ಯುವಕ ಅಂಬದಾಸ್ (22) ಸಾವನ್ನಪ್ಪಿದ್ದಾನೆ. ಲಾರಿ ಚಾಲಕ ಶರ್ಮಾಗೆ ಸಣ್ಣಪುಟ್ಟು ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಕುರುಬರಹಳ್ಳಿ ಬಳಿ ರಸ್ತೆ ಬಹುತೇಕವಾಗಿ ಇಳಿಜಾರಾಗಿತ್ತು. ಲಾರಿ ಓವರ್ ಲೋಡ್ ಆಗಿದ್ದರಿಂದ ಇಳಿಜಾರಿನಲ್ಲಿ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಏರ್‌ಪೋರ್ಟ್ ಪಿಕ್‌ಅಪ್‌ಗಾಗಿ ಕಾಯುತ್ತಾ ನಿಂತಿದ್ದ.
ಈ ವೇಳೆ ಲಾರಿ ಗುದ್ದಿದ ರಭಸಕ್ಕೆ ಕಾರನ್ನು 50 ರಿಂದ 100 ಮೀ ದೂರಕ್ಕೆ ಎಳೆದೊಯ್ದಿದೆ. ಪರಿಣಾಮ ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಈ ವೇಳೆ ಲಾರಿ ಚಾಲಕ ರಾಜಕಾಲುಗೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾನೆ.ಲಾರಿ ಹಾಗೆಯೇ ಮುಂದೆ ಹೋಗಿ ಸ್ಕ್ರಾಪ್ ಗೋಡೌನ್‌ಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.








