ಬೆಂಗಳೂರು : ಕೇಂದ್ರ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಅಬಕಾರಿ ಸಂಘ ಇಳಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯದಿಂದಲೂ ಅಬಕಾರಿ ಸುಂಕ ಇಳಿಸುತ್ತೀರಾ ಅಂದ್ರೆ ಪ್ರಶ್ನೆಗೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ ಸಂಪುಟದಲ್ಲಿ ಚರ್ಚೆಗೆ ಬಂದರೆ ಚರ್ಚೆ ಮಾಡುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ಹೌದು ಗಲ್ಫ್ ಯುದ್ಧದ ಮಧ್ಯೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಅಬಕಾರಿ ಸುಂಕ ಇಳಿಕೆ ಮಾಡಿದೆ. ಪೆಟ್ರೋಲ್ ಅಬಕಾರಿ ಸುಂಕ 13 ರೂ. ಇಂದ ರೂ.3 ಗೆ ಇಳಿಕೆ ಮಾಡಿದರೆ ಇನ್ನು ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂಪಾಯಿಗೆ ಇಳಿಕೆ ಮಾಡಲಾಗಿದೆ. ಡೀಸೆಲ್ ಮೇಲೆ 10 ರೂಪಾಯಿ ಅಬಕಾರಿ ಸುಂಕ ಹಾಕಲಾಗುತ್ತಿತ್ತು. ಈಗ ಡೀಸೆಲ್ ಮೇಲಿನ ಅಬಕಾರಿ ಸುಂಕ ಶೂನ್ಯಕ್ಕೆ ಇಳಿಸಲಾಗಿದೆ. ಇದೀಗ ಸಂಪುಟದಲ್ಲೂ ಕೂಡ ಅಬಕಾರಿ ಸುಖವಿಲ್ಲ ಕುರಿತು ವಿಷಯ ಬಂದರೆ ಚರ್ಚೆ ಮಾಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.








